ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ
National Cleanliness Day
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ
ಧಾರವಾಡ 30: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಖಾಯಂ ಜನತಾ ನ್ಯಾಯಾಲಯ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಸಿವಿಲ್ ನ್ಯಾಯಾಲಯಗಳ ಆವರಣದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಧಾರವಾಡ ಖಾಯಂ ಜನತಾ ನ್ಯಾಯಾಲಯದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷ ನಾಗರಾಜಪ್ಪ ಎ.ಕೆ., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮ ಹಾಗೂ ಸಿಬ್ಬಂದಿಯವರು, ಖಾಯಂ ಜನತಾ ನ್ಯಾಯಾಲಯದ ಸದಸ್ಯರು ಮತ್ತು ಸಿಬ್ಬಂದಿಯವರು, ಮುಖ್ಯ ಕಾನೂನು ಅಭಿರಕ್ಷಕರ ಕಛೇರಿಯ ನ್ಯಾಯವಾದಿಗಳು ಹಾಗೂ ಸಿಬ್ಬಂದಿಯವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 