ಗದಗ 14: ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಾಗೂ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನಾಚರಣೆ ಪೂರ್ವಭಾವಿ ಸಭೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿತು. ಜನೇವರಿ 30 ರಿಂದ ಫೆಬ್ರುವರಿ 13ರ ವರೆಗೆ ಜರುಗುವ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಹಾಕಿಕೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಫೆಬ್ರುವರಿ 8ರಂದು ಜರುಗುವ ರಾಷ್ಟ್ರೀಯ ಜಂತು ಹುಳು ನಿವಾರಣ ದಿನಾಚರಣೆಯ ಪ್ರಯುಕ್ತ ಜಿಲ್ಲೆಯಲ್ಲಿನ 1 ರಿಂದ 19 ವಷದೊಳಗಿನ ಎಲ್ಲ ಮಕ್ಕಳಿಗೆ ಈ ಮಾತ್ರೆಗಳನ್ನು ನೀಡಲು ಸೂಕ್ತ ಕಾರ್ಯಕ್ರಮ ಜರುಗಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಜಿ.ಎಸ್.ಪಲ್ಲೇದ, ಜಿಲ್ಲಾ ಆರ.ಸಿ.ಎಚ್. ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೇಣುಕಾ ಕೊರವನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ರಾಮಕೃಷ್ಣ ಪಡಗಣ್ಣವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಜಿ.ಎಲ್.ಬಾರಾಟಕ್ಕೆ, ಎಲ್ಲ ತಾಲೂಕು ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಇಲಾಖೆಗ ಅಧಿಕಾರಿಗಳು ಭಾಗವಹಿಸಿದ್ದರು.