ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” ಕಾರ್ಯಕ್ರಮ
ವಿಜಯಪುರ 26 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ ಶುಕ್ರವಾರ ಆಯೋಜಿಸಿದ್ದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಸಮಾಜ ವಿಜ್ಞಾನ ನಿಕಾಯದ ಡೀನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಆಶಯಗಳನ್ನು ಪ್ರತಿಯೊಬ್ಬರು ಅರಿತುಕೊಂಡು ದಿನನಿತ್ಯದ ಜೀವನದಲ್ಲಿ ಪಾಲನೆ ಮಾಡಬೇಕು ಎಂದರು.ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ.ಲಕ್ಷ್ಮಿದೇವಿ ವೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ಪಿ.ಕಣ್ಣನ್, ಪ್ರೊ.ಓಂಕಾರ ಕಾಕಡೆ, ಪ್ರೊ.ಸಕ್ಪಾಲ್ ಹೂವಣ್ಣ, ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಡಾ.ಆರ್.ವಿ.ಚಂದ್ರಶೇಖರ್, ಚೈಲ್ಡ್ ರೈಟ್ಸ್ ಟ್ರಸ್ಟ್‌ನ ವೆಂಕಟೇಶ್, ಯಮನೂರ್ಪ ಹೆಚ್, ವಿವಿಧ ವಿಭಾಗದ ಅಧ್ಯಾಪಕರು, ಅತಿಥಿ ಉಪನ್ಯಾಸಕರು, ಮಹಿಳಾ ಅಧ್ಯಯನ ಕೇಂದ್ರದ ಸಿಬ್ಬಂಧಿ ವರ್ಗ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಸಂವಾದ ಕಾರ್ಯಕ್ರಮ: ಮಹಿಳಾ ವಿವಿಯ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ ಇವರ ಸಹಯೋಗದಲ್ಲಿ ವಿದ್ಯಾರ್ಥಿನಿಯರೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರ ಸಂವಾದ ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಆಯೋಜಿಸಲಾಗಿತ್ತು.
ಸಂವಾದದಲ್ಲಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ವಿದ್ಯಾರ್ಥಿನಿಯರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರವನ್ನು ನೀಡಿದರು. ಕಾರ್ಯಕ್ರಮದಲ್ಲಿ ಪ್ರೊ.ಲಕ್ಷ್ಮಿದೇವಿ ವೈ, ಪ್ರೊ.ಶಾಂತಾದೇವಿ ಟಿ. ಹಾಗೂ ಮಹಿಳಾ ಅಧ್ಯಯನ ವಿಭಾಗದ ಸಿಬ್ಬಂದಿ ವರ್ಗದವರು ಹಾಗೂ ವಿವಿಧ ವಿಭಾಗದ ಅತಿಥಿ ಉಪನ್ಯಾಸಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.