ಕಂಪ್ಲಿಯಲ್ಲಿ ಆಚರಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ
ಕಂಪ್ಲಿ 10: ಪ್ರತಿಯೊಬ್ಬರ ಹಕ್ಕು ರಕ್ಷಣೆ ಮಾಡುವುದು ನಾಗರಿಕರ ಜವಾಬ್ದಾರಿ ಎಂದು ತಹಶೀಲ್ದಾರ್ ಶಿವರಾಜ ಶಿವಪುರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಗಂಣದಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಿದ ನಂತರ ಮಾತನಾಡಿ, ಮಾನವ ಹಕ್ಕುಗಳ ರಕ್ಷಣೆಗೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದೆ. ಸಾಂವಿಧಾನಿಕ ಮಾನ್ಯತೆ ನೀಡಿದೆ. ಅವುಗಳ ಉಲ್ಲಂಘನೆಯಾದಾಗಾ ಕಾನೂನು ನೆರವು ಪಡೆಯಲು ಅವಕಾಶವಿದೆ.
ಮಾನವ ತನ್ನ ಇಷ್ಟದಂತೆ ಜೀವಿಸುವ, ಅಭಿಪ್ರಾಯ ವ್ಯಕ್ತಪಡಿಸುವ, ಧರ್ಮ ಅನುಸರಿಸುವ ಸಮಾನತೆ ಸೇರಿದಂತೆ ಇತರೆ ಹಕ್ಕುಗಳ ಉಲ್ಲಂಘನೆಯಾದಾಗ ಅಗತ್ಯ ಕಾನೂನು ನೆರವು ಪಡೆಯಬಹುದು. ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡುವ ಹಕ್ಕುಗಳನ್ನು ವಿವರಿಸಲಾಗಿದೆ. ಜೀವನದ ಸ್ವಾತಂತ್ರ್ಯ ಸಮಾನತೆ ಮತ್ತು ವ್ಯಕ್ತಿಯ ಘನತೆಯೇ ಮಾನವ ಹಕ್ಕುಗಳು. ಯಾರಿಗೂ ತಾರತಮ್ಯ ಸಲ್ಲದು ಎಂದರು. ಇಲ್ಲಿನ ಮಾನವ ದಿನಾಚರಣೆ ನಿಮಿತ್ಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಕೆಲ ನಿಮಿಷ ಮೌನಾಚರಣೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಪಂ ಇಒ ಆರ್.ಕೆ.ಶ್ರೀಕುಮಾರ್, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ್, ಮುಖ್ಯಾಧಿಕಾರಿ ಕೆ.ದುರುಗಣ್ಣ, ಶಿರಸ್ತೇದಾರ ರಮೇಶ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.