ಗದಗ 19: ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸುವ ಮತ್ತು ಬಲಪಡಿಸುವ ಅರ್ಪಣಾ ಮನೋಭಾವದಿಂದ ಕೆಲಸ ಮಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಭೋಧಿಸಿದರು. ಗದಗ ಜಿಲ್ಲಾಧಿಕಾರಿಗಳ ಅಡಿಟೋರಿಯಂನಲ್ಲಿ ಜರುಗಿದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.