ಬೆಳಗಾವಿ, 9: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಎಲ್.ಐ.ಎಸ್. ಅಕ್ಯಾಡೆಮಿ, ಬೆಂಗಳೂರು ಹಾಗೂ ಕನರ್ಾಟಕ ಸಕರ್ಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಂಟಿಯಾಗಿ "ಗ್ರಂಥಾಲಯಗಳಲ್ಲಿ ಅನ್ವೇಷಣೆ ಅವಕಾಶಗಳು" ವಿಷಯದ ಮೇಲೆ ವಿತಾವಿ "ಜ್ಞಾನ ಸಂಗಮ" ಆವರಣದಲ್ಲಿ ಏರ್ಪಡಿಸಲಾದ ಮೂರು ದಿನಗಳ ರಾಷ್ಟ್ರ ಮಟ್ಟದ ಸಮ್ಮೇಳನದ ಸಮಾರೋಪ ಸಮಾರಂಭ ದಿ. 08 ರಂದು ಜರುಗಿತು. ಡಾ. ಎಸ್. ಶ್ರೀನಿವಾಸ ಕುಮಾರ, ಕುಲಪತಿಗಳು, ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯ, ಅನಂತಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ ಕುಮಾರ "ನಮ್ಮ ದೇಶದ ವಿಶ್ವವಿದ್ಯಾಲಯಗಳು ಗ್ರಂಥಾಲಯ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಭಾಗಗಳಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ. ಜ್ಞಾನವನ್ನು ಪ್ರಸಾರ ಮಾಡುವ ಜವಾಬ್ದಾರಿ ಗ್ರಂಥಾಲಯಗಳ ಮೇಲಿದೆ" ಎಂದು ಹೇಳಿದರು.
ದೇಶದ ಅಭಿವೃದ್ಧಿ ಉತ್ತಮ ಗುಣಮಟ್ಟದ ನಾಗರಿಕರು, ಶಿಕ್ಷಣ ಹಾಗೂ ಪ್ರಾಧ್ಯಾಪಕರ ಮೇಲೆ ಅವಲಂಬಿತವಾಗಿದೆ. ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಮ್ಮೇಳನಗಳು ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗುತ್ತವೆ" ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವಿತಾವಿ ಪರೀಕ್ಷಾ ವಿಭಾಗದ ಕುಲಸಚಿವರು ಹಾಗೂ ಪ್ರಭಾರಿ ಕುಲಸಚಿವರಾದ ಡಾ. ಸತೀಶ ಅಣ್ಣಿಗೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ "ಡಿಟಿಟಲ್ ಯುಗದಲ್ಲಿ ಗ್ರಂಥಪಾಲಕರು ಹೆಚ್ಚಿನ ಸವಾಲುಗಳನ್ನು ಎದುರಿಸಬೇಕಾಗಿದೆ" ಎಂದು ಹೇಳಿದರು. ಇದೇ ಸಂದರ್ಭದಲ್ಲಿ ವಿತಾವಿ ವತಿಯಿಂದ ಡಾ. ಎಸ್. ಶ್ರೀನಿವಾಸ ಕುಮಾರ ಅವರನ್ನು ಸನ್ಮಾನಿಸಲಾಯಿತು.
ಎಲ್.ಐ.ಎಸ್ ಅಕ್ಯಾಡೆಮಿ ಅಧ್ಯಕ್ಷರಾದ ಡಾ. ಪಿ. ವಿ. ಕೊಣ್ಣೂರ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಮಧುಸೂದನ, ಡಾ. ಶ್ಯಾಮ ಪೂಜಾರ, ಡಾ. ಕೆ. ಆರ್. ಮುಲ್ಲಾ, ಗ್ರಂಥಪಾಲಕರು ವಿತಾವಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಇಂಜಿನಿಯರಿಂಗ್ ಕಾಲೇಜ್ ಹಾಗೂ ಸಾರ್ವಜನಿಕ ಗ್ರಂಥಾಲಯಗಳ ಗ್ರಂಥಪಾಲಕರು ಸಮಾರಂಭದಲ್ಲಿ ಭಾಗವಹಿಸಿದ್ದರು.