ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮ - 2025
National Mathematics Day Celebration Program - 2025
ಬಾಗಲಕೋಟ 22: ನಮ್ಮ ಸಂಸ್ಥೆಯಲ್ಲಿ ದಿ. 22ರಂದು ರಾಷ್ಟ್ರೀಯ ಗಣಿತ ದಿನಾಚರಣೆ 2025 ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಎಸ್. ಎಸ್. ಹುಬ್ಬಳ್ಳಿಯವರು ವಹಿಸಿಕೊಂಡಿದ್ದರು, ವಿಜ್ಞಾನ ವಿಭಾಗದ ಮುಖ್ಯಸ್ಥೆ ಜಯಶ್ರೀ ಗದ್ದಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಜಗತ್ಪ್ರಸಿದ್ದ ಶ್ರೇಷ್ಠ ಗಣಿತಜ್ಞ ಡಾ. ಶ್ರೀನಿವಾಸ್ ರಾಮಾನುಜನರ ಜನ್ಮ ದಿನಾಚರಣೆಯ ನಿಮಿತ್ಯವಾಗಿ ದೇಶಾದ್ಯಂತ ‘ಗಣಿತ ದಿನ’ ವನ್ನು ಆಚರಿಸಲಾಗುತ್ತಿದ್ದು ರಾಮಾನುಜನರ ಸಾಧನೆಗಳು ಇಂದಿನ ವಿದ್ಯಾರ್ಥಿಗಳಿಗೆ ದಾರೀದೀಪಗಳಾಗಿವೆ ಎಂದು ತಿಳಿಸಿದರು.
ಪ್ರಾಚಾರ್ಯರಾದ ಎಸ್. ಎಸ್. ಹುಬ್ಬಳ್ಳಿಯವರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ವೃದ್ಧಿಸಿಲು ಇಂತಹ ಮಹಾನುಭಾವರ ದಿನಾಚರಣೆಯನ್ನು ಹಮ್ಮಿಕೊಂಡು ಅವರ ಸಾಧನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕೆಂದು ಸಲಹೆ ನೀಡಿದರು ಕಾರ್ಯಕ್ರಮದಲ್ಲಿ ರಾಮಾನುಜನರ ಜೀವನ ಸಾಧನೆಗಳ ಕುರಿತು ವೀಡಿಯೋ ಪ್ರದರ್ಶನ ಮಾಡಲಾಯಿತು ಕಾರ್ಯಕ್ರಮವನ್ನು ಸ್ಮಿತಾ ಪೂಜಾರ ನಿರೂಪಿಸಿದರು ಹಾಗೂ ಕೊನೆಯಲ್ಲಿ ಎಂ. ಕೆ. ಚವಡಿಯವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ಗಣಿತ ವಿಷಯದ ಮೇಲೆ ವಿದ್ಯಾರ್ಥಿಗಳಿಗಾಗಿ ರಸ ಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 