ಬಿಲ್ಲಹಳ್ಳಿ ಗ್ರಾಮದ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ
National Mathematics Day celebrated at Billahalli village high school
ರಾಣಿಬೆನ್ನೂರ:26 ತಾಲೂಕಿನ ಬಿಲ್ಲಹಳ್ಳಿ ಗ್ರಾಮದ ಮಾತಾ ರವೀಂದ್ರ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯ ಚಂದ್ರಶೇಖರ ಅಸುಂಡಿ ಮಾತನಾಡಿ, ಗಣಿತವು ಕಬ್ಬಿಣದ ಕಡಲೆ ಅಲ್ಲ ಅದು ಒಂದು ಸುಲಭವಾದ ವಿಷಯ ಅದನ್ನು ಏಕಾಗ್ರತೆಯಿಂದ ಆಲಿಸಿ ಅದರ ಬಗ್ಗೆ ತಿಳಿದುಕೊಂಡಾಗ ತುಂಬಾ ಸುಲಭವಾಗುವುದು. ಗಣಿತದಲ್ಲಿ ಮಕ್ಕಳು ಹೆಚ್ಚು ಆಸಕ್ತಿಯನ್ನು ಹೊಂದಬೇಕೆಂದು ಸೂಚಿಸಿದರು ಮತ್ತು ಗಣಿತದ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ವಿವರಿಸಿದರು. ನವೀನ್ ನಾಯಕ್ ಕಾರ್ಯಕ್ರಮ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಸುಮಾ ಕಾಯಕದ ನಿರೂಪಿಸಿದರು ರೂಪ ಆಡಿನವರ ಸ್ವಾಗತಿಸಿದರು. ಅಮೃತ ಬಂಗೇರ ವಂದಿಸಿದರು. ಶಾಲೆಯ ಸಿಬ್ಬಂಧಿವರ್ಗ ಸರ್ವ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 