ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ- ಸಾರ್ವಜನಿಕರಿಗೆ ಹಾಗೂ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಅರಿವು
ರಾಣೆಬೇನ್ನೂರ 06: ಅಮೂಲ್ಯವಾದ ಜೀವವನ್ನು ರಕ್ಷಿಸಿಕೊಳ್ಳಲು ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ನಗರದ ಬಸ್ ನಿಲ್ದಾಣ ಹಾಗೂ ಆಟೋ ನಿಲ್ದಾಣದಲ್ಲಿ ಏರಿ್ಡಸಲಾಗಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025 ರ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಹಾಗೂ ಚಾಲಕರಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.
ಸಣ್ಣಪುಟ್ಟ ತಪ್ಪಿನಿಂದ, ತಾತ್ಸಾರ, ಬೇಜವಾಬ್ದಾರಿ ಹಾಗೂ ನಿರ್ಲಕ್ಷತನದಿಂದ ವಾಹನ ಚಾಲನೆ ಮಾಡುವುದರಿಂದಾಗಿ ದೊಡ್ಡ ಅನಾಹುತ ಉಂಟಾಗಿ ಸಾವು ನೋವು ಸಂಭವಿಸುವ ಸಂಖ್ಯೆ ಹೆಚ್ಚಾಗಿರುವುದು ನೋವಿನ ಸಂಗತಿಯಾಗಿದೆ ಎಂದರು. ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು, ಅತಿ ವೇಗ ಅವಸರಕ್ಕೆ ಕಾರಣ, ಚಾಲನೆ ಮಾಡುವಾಗ ಸಂಕೇತಗಳನ್ನು ಪಾಲಿಸಬೇಕು, ಸೀಟ್ ಬೆಲ್ಟ್ ಬಳಸಬೇಕು ಮುಖ್ಯವಾಗಿ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು ಎಂದರು. ಅಪಘಾತ ಸಂಖ್ಯೆಗಳ ಕಡಿವಾಣ ಮಾಡಲು ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು. ಆಂದೋಲನದ ಮೂಲಕ ಎಲ್ಲರಲ್ಲೂ ಜಾಗೃತಿ ಮೂಡಬೇಕಾಗಿದೆ ಎಂದರು. ಈ ಸಮಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಕುರಿತು ಜನರಿಗೆ ಅರಿವು ಮೂಡಿಸುವ ಭಿತ್ತಿಚಿತ್ರ ಬಿಡುಗಡೆ ಮಾಡಲಾಯಿತು. ಈ ಸಮಯದಲ್ಲಿ ಹಿರಿಯ ಮೋಟಾರು ವಾಹನ ನೀರೀಕ್ಷಕರಾದ ಅನಿಲ ಮಾಸೂರು, ಕಚೇರಿ ಸಿಬ್ಬಂದಿಗಳಾದ ಈಶ್ವರ್ಪ ತೇಲಿ, ನಾಗರಾಜ ಟಿ.ಕೆ, ಆರ್.ಜಗದೀಶ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.