ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಗೆ ಚಾಲನೆ.
National Road Safety Month celebration march kicks off.
ಕಾರವಾರ 27: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ "ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ" ಯ ಜಾಥಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಅವರು, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಚಾಲನೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಡಿವೈಎಸ್ ಪಿ ಗೀರೀಶ್, ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಭಾಗ್ವತ್, ಕಾರ್ಯದರ್ಶಿ ಚರಣ್ ನಾಯ್ಕ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗಣಪತಿ ಹೆಗಡೆ, ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿಬ್ಬಂದಿಗಳು, ಅರೆ ಕಾಲಿಕ ಸ್ವಯಂ ಸೇವಕರು, ಆಟೋ ಚಾಲಕರು, ಸಾರ್ವಜನಿಕರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 