ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಜಮಖಂಡಿ, 21 : ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ. ತಂಬಾಕು ಸೇವನೆಯಿಂದ ದುಷ್ಪರಿಣಾಮಗಳು ಮತ್ತು ಕಾನುನೂ ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳು ಕೆಂಪು ಗುಲಾಬಿ ಹೂವನ್ನು ನೀಡಿ. ಕರಪತ್ರಗಳನ್ನು ವಿತರಿಸಿ ಜಾಗೃತಿಯನ್ನು ಮೂಡಿಸಿದರು.ಕೋಟ್ಪಾ-2003 ರ ಕಾಯ್ದೆಯ ಸೆಕ್ಷನ್ 6(ಬಿ) ಯ ನಿಬಂಧನೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಜಾತಾ ಮೂಲಕ ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ ತಂಬಾಕು ಮಾರಾಟಗಾರರಿಗೆ ಅದರ ದುಷ್ಪರಿಣಾಮಗಳ ಬಗ್ಗೆ ವಿವರಿಸಿ ಮಾರಾಟ ಮಾಡದಂತೆ ವಿನಂತಿ ಮಾಡಿಕೊಂಡರು. ತಾಲೂಕು ಆರೋಗ್ಯ ಅಧಿಕಾರಿಗಳು ಡಾ. ಜಿ.ಎಸ್. ಗಲಗಲಿ ಅವರು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವೀರಭದ್ರ್ಪ ಜಿ.ಎಮ್. ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಉಮೇಶ ಜೋಶಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಟಳ್ಳಿ, ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಶಿವಲಿಂಗ, ತಾಲೂಕು ಆರೋಗ್ಯ ಸಿಬ್ಬಂದಿಗಳಾದ ಸಂತೋಷ ನಾಯಕ, ಮಲ್ಲು ಅಸ್ಕಿ, ರವಿ ಪಾಟೀಲ, ರವಿ ಕಾಂಬಳೆ, ಶಂಕರ ಮಡಿವಾಳಯ್ಯ, ಎಸ್,ಎಮ್. ಕೋರಿ, ಅನೀಲ ಸೊರಗೊಂಡ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.