ನ.19 ರಂದು ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ.
ನ.19 ರಂದು ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ.
ವಿಜಯನಗರ (ಹೊಸಪೇಟೆ) 16: ನ.19 ರಂದು ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ ಮಾಡುವ ಮೂಲಕ ಐಕ್ಯತಾ ಪ್ರಮಾಣ ವಚನವನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಾರ್ಗದರ್ಶನದಂತೆ ಸಪ್ತಾಹದ ಅಂಗವಾಗಿ ನ.19 ರಿಂದ 25 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನ.19ರಂದು ರಾಷ್ಟ್ರೀಯ ಐಕ್ಯತಾದಿನ, ನ.20 ರಂದು ಅಲ್ಪಸಂಖ್ಯಾತರ ಕಲ್ಯಾಣ ದಿನ, ನ.21ರಂದು ಭಾಷಾ ಸೌಹಾರ್ದತಾ ದಿನ, ರಕ್ಷಣಾ ದಿನಗಳನ್ನು ಆಚರಣೆ ಮಾಡಲು ಕ್ರಮವಹಿಸಲು ಸೂಚಿಸಿದ್ದಾರೆ.