ನವಭಾರತ ನಿರ್ಮಾಣಕ್ಕೆ ನೆಹರು ಅವರ ಕೊಡುಗೆ ಅನನ್ಯವಾದದ್ದು: ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ
Nehru's contribution to building a new India is unique: Bal Vikas Academy President Sangamesh
ಧಾರವಾಡ ನ.14: ದೇಶದ ಮೊದಲ ಪ್ರಧಾನಿಯಾಗಿ ನವ ಭಾರತದ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು ಪಂಡಿತ ಜವಾಹರಲಾಲ ನೆಹರೂಜಿ ಅವರು. ಅವರ ಆದರ್ಶಗಳು ಸದಾ ನಮ್ಮೆಲ್ಲರಿಗೂ ಪ್ರೇರಣೆ ನೀಡುವಂತಹವು. ಮಕ್ಕಳನ್ನು ಅಪಾರವಾಗಿ ಪ್ರೀತಿಸುತ್ತಿದ್ದ ನೆಹರೂ ಅವರು ತಮ್ಮ ಜನ್ಮ ದಿನವನ್ನು ದೇಶದ ಮಕ್ಕಳಿಗಾಗಿ ಸಮರ್ಿಸಿದವರು. ಇಂದು ಮಕ್ಕಳ ದಿನಾಚರಣೆಯನ್ನು ನಾವೆಲ್ಲ ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ಮಕ್ಕಳೇ ನಾಡಿನ ನಾಳಿನ ಭವಿಷ್ಯ ಆಶಾಕಿರಣಗಳಾಗಿದ್ದು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸದಾ ಬದ್ಧವಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರು ಸಂಗಮೇಶ ಬಬಲೇಶ್ವರ ಅವರು ಹೇಳಿದರು.
ಅವರು ಇಂದು (ನ.14) ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ನಾಡಿನ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಮಕ್ಕಳ ಸಮ್ಮುಖದಲ್ಲಿ ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ, ಮಾತನಾಡಿದರು. ಮಕ್ಕಳ ದಿನಾಚರಣೆ ಪ್ರಯುಕ್ತ ಅಕಾಡೆಮಿಯ ಸಭಾಭವನದಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಇಡೀ ಆವರಣ ವಿವಿಧ ವೇಷ ಭೂಷಣಗಳಿಂದ ವಿಶೇಷ ಉಡುಪು ಧರಿಸಿ ಆಗಮಿಸಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು. ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಮಕ್ಕಳು ಇಂದು ಬೆಳಿಗ್ಗೆ 6:30 ಗಂಟೆಗೆ ಧಾರವಾಡದ ಪಾರಂಪರಿಕ ನಡಿಗೆ ಭಾಗವಹಿಸಿ, ನಾಡಿಗೆ ಕೊಡುಗೆ ನೀಡಿದ ವಿದ್ವಾಂಸರು ಜನ್ಮ ತಾಳಿದ ನಿವಾಸಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 