ಕುಮಟಾ ಕಾರವಾರಕ್ಕೆ ನೂತನ ಬಿಇಒಗಳ ನೇಮಕ
New BEOs appointed for Kumta Karwar
ಕುಮಟಾ ಕಾರವಾರಕ್ಕೆ ನೂತನ ಬಿಇಒಗಳ ನೇಮಕ
ಕಾರವಾರ 27 : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಕಾರವಾರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು, ನೂತನ ಬಿಇಒ ಗಳನ್ನು ಸರ್ಕಾರ ನೇಮಕ ಮಾಡಿದೆ .ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಹಾಸ ಪದ್ಮನಾಭ ರಾಯ್ಕರ್ ಅವರ ಸ್ಥಾನಕ್ಕೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾಗಿದ್ದ ಉಮೇಶ ಎನ್. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.ಇನ್ನೂ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್ ಅವರ ಅವರನ್ನ ವರ್ಗಾವಣೆ ಮಾಡಿದ್ದು,ಉದಯ ರಾಮಚಂದ್ರ ನಾಯ್ಕ ರನ್ನು ನಿಯೋಜನೆ ಮಾಡಲಾಗಿದೆ. ಇನ್ನೂ ಕಾರವಾರ ಹಾಗೂ ಕುಮಟಾದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿಇಒ ಗಳನ್ನು ವರ್ಗಾವಣೆ ಮಾಡಲಾಗಿದ್ದು, ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ಕಾಯ್ದಿರಿಸಲಾಗಿದೆ.ಅಧಿಕಾರ ಸ್ವೀಕರಿಸಿದ ಉದಯ ನಾಯ್ಕ :ಕುಮಟಾ ಕ್ಷೇತ್ರದ ನೂತನ ಕ್ಷೇತ್ರ ಶಿಕ್ಷಾಧಿಕಾರಿಯಾಗಿ ನೇಮಕಗೊಂಡಿರುವ ಉದಯ್ ನಾಯ್ಕ ಅವರು ಇಂದು ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು....
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 