ರಾಮಸಾಗರದಲ್ಲಿ ನೂತನ ಪಶು ಚಿಕಿತ್ಸಾಲಯ ಲೋಕಾರೆ್ಣ
New veterinary clinic opens in Ramsagar
ರಾಮಸಾಗರದಲ್ಲಿ ನೂತನ ಪಶು ಚಿಕಿತ್ಸಾಲಯ ಲೋಕಾರೆ್ಣ
ಕಂಪ್ಲಿ 10: ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಶಾಸಕರಾದ ಜೆ.ಎನ್.ಗಣೇಶ್ ಅವರು ನೂತನ ಪಶು ಚಿಕಿತ್ಸಾಲಯವನ್ನು ಲೋಕಾರೆ್ಣಗೊಳಿಸಿದರು.
ನಂತರ ಮಾತನಾಡಿದ ಶಾಸಕರಾದ ಜೆ.ಎನ್.ಗಣೇಶ್ ಅವರು ತಾಲ್ಲೂಕಿನಲ್ಲಿಯೇ ದೊಡ್ಡ ಗ್ರಾಮವಾದ ರಾಮಸಾಗರದಲ್ಲಿ ಜಾನುವಾರುಗಳ ಸಂಖ್ಯೆಯೂ ಅಧಿಕವಾಗಿದ್ದು, ಜಾನುವಾರುಗಳಿಗೆ ರೋಗರುಜಿನಗಳು ಬಂದರೆ ಕಂಪ್ಲಿ ಪಟ್ಟಣಕ್ಕೆ ಚಿಕಿತ್ಸೆಗಾಗಿ ಹೋಗಬೇಕಿತ್ತು.ಇದರಿಂದ ರೈತರಿಗೆ, ಕುರಿಗಾಯಿಗಳಿಗೆ ತೊಂದರೆಯಾಗಿತ್ತು. ಕಳೆದ ಎರಡು ವರ್ಷಗಳಿಂದಲೂ ಗ್ರಾಮದಲ್ಲಿ ಪಶು ಚಿಕಿತ್ಸಾ ಆರಂಭಕ್ಕೆ ನಿರಂತರ ಪ್ರಯತ್ನಗಳನ್ನು ಮಾಡಲಾಗಿತ್ತು.ಇದೀಗ ಗ್ರಾಮದಲ್ಲಿ ಪಶು ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದ್ದು, ಪಶು ಇಲಾಖೆಯ ಸಿಬ್ಬಂದಿಗಳು ಗ್ರಾಮದ ಹಾಗೂ ಅಕ್ಕಪಕ್ಕದ ಗ್ರಾಮದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆಗಳನ್ನು ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಆಶಾ,ಉಪಾಧ್ಯಕ್ಷ ಆರ್.ಎಂ.ರಾಮಯ್ಯ, ಗ್ರಾ.ಪಂ.ಸದಸ್ಯರು, ಗ್ರಾಮದ ಮುಖಂಡರಾದ ಎಚ್.ಶಿವಶಂಕರಗೌಡ, ಎಚ್.ಜಗದೀಶಗೌಡ, ಬಿ.ನಾರಾಯಣಪ್ಪ,ಕ್ರಿಷ್ಣಪ್ಪ,ಕೋಟೆ ಷಣ್ಮುಖ, ಕಂಪ್ಲಿ ಪುರಸಭೆ ಸದಸ್ಯ ಸಿ.ಆರ್.ಹನುಮಂತ,ಕಂಪ್ಲಿ ಪಶು ವೈದ್ಯಾಧಿಕಾರಿ ಡಾ.ಬಸವರಾಜ.ಕೆ.ಯು. ಜಾನುವಾರು ಅಧಿಕಾರಿ ರಾಜೇಂದ್ರಕುಮಾರ ಕದಂ, ಪಶುವೈದ್ಯಕೀಯ ಪರೀಕ್ಷಕರು ರಾಮಚಂದ್ರ.ಟಿ. ಪಶು ವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು, ಗ್ರಾ.ಪಂ.ಪಿಡಿಒ, ಕಾರ್ಯದರ್ಶಿ, ಗ್ರಾಮದ ಸಾರ್ವಜನಿಕರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 