ಪತ್ರಿಕಾ ವಿತರಕರ ಸೇವೆ ಸ್ಮರಣೀಯ: ಪಿಎಸ್ಐ ಆನಂದ ಕ್ಯಾರಿಕಟ್ಟಿ
Newspaper distributors' service is memorable: PSI Anand Karikatti
ಕೆಳಗೋಳೇಶ್ವರ, ಸೆ.5: ಮುಂಜಾನೆ ಇಡೀ ಜಗತ್ತು ನಿದ್ರೆಯಿಂದ ಎದ್ದೇಳುವ ಮುನ್ನವೇ ಚಳಿ-ಮಳೆ ಎನ್ನದೆ ಸಾರ್ವಜನಿಕರ ಮನೆ ಬಾಗಿಲಿಗೆ ಜ್ಞಾನದ ಬೆಳಕನ್ನು ತಲುಪಿಸುವ ಪತ್ರಿಕಾ ವಿತರಕರ ಸೇವೆ ಸ್ಮರಣೀಯವಾದದ್ದು ಎಂದು ಪಿಎಸ್ಐ ಆನಂದ ಕ್ಯಾರಿಕಟ್ಟಿ ಹೇಳಿದರು.
ಪಟ್ಟಣದ ಜಿಲ್ಲಾ ವರದಿಗಾರ ಮಾಳಿಂಗರಾಯ ಪೂಜಾರ ಅವರ ನಿವಾಸದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಪತ್ರಿಕೆ ವಿತರಿಸುವ ಹುಡುಗರಿಗೆ ನೋಟ್ಬುಕ್ ಹಾಗೂ ಪೆನ್ಬಾಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪತ್ರಿಕೆಗಳನ್ನು ಮನೆಮನೆಗೆ ತಲುಪಿಸುವ ವಿತರಕರು ಸಮಾಜದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿದ್ದಾರೆ. ಈ ಸೇವೆಯನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಪತ್ರಿಕಾ ವಿತರಕ ಮಾಳಿಂಗರಾಯ ಪೂಜಾರ ಅವರು ತಮ್ಮ ಜನ್ಮದಿನವನ್ನು ಪತ್ರಿಕೆ ವಿತರಿಸುವ ಮಕ್ಕಳಿಗೆ ನೋಟ್ಬುಕ್ ಹಾಗೂ ಇತರ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುವ ಮೂಲಕ ಆಚರಿಸುತ್ತಿರುವುದು ಮಾದರಿಯಾಗಿದೆ. ಮಕ್ಕಳ ಓದಿಗೆ ಸಹಾಯ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಗಾರಂಟಿ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಮಡಿವಾಳ ಮಾತನಾಡಿ, ಸುದ್ದಿಮನೆ ಮತ್ತು ಓದುಗರ ನಡುವೆ ಜೀವಂತ ಕೊಂಡಿಯಾಗಿ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರನ್ನು ಗೌರವಿಸುವ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಸೊರಟೂರ, ರಾಮಣ್ಣ ಲಮಾಣಿ (ಶಿಗ್ಲಿ), ನೀಲಪ್ಪ ಪೂಜಾರ, ದಿಗಂಬರ ಪೂಜಾರ, ಶಿವಲಿಂಗಯ್ಯ ಹೊತ್ತಗಿಮಠ, ಸಾಧಿಕ್ ಮಿರ್ಜಾ, ನಿಂಗಪ್ಪ ಪೂಜಾರ, ಹನಮಂತಪ್ಪ ಬನ್ನಿ, ಬೀರ್್ಪ ಪೂಜಾರ, ಹನಮಂತ ಉಳ್ಳಿಟ್ಟಿ, ಶಿವಪ್ಪ ಪೂಜಾರ, ಸತ್ಯಪ್ಪ ಉಳ್ಳಿಟ್ಟಿ, ದೇವಪ್ಪ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪತ್ರಕರ್ತ ನಾಗರಾಜ ಹನಗಿ ಹಾಗೂ ಮಾಳಿಂಗರಾಯ ಪೂಜಾರ ಕಾರ್ಯಕ್ರಮ ನಿರ್ವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 