ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮುಗಿದ ಯಾವುದೇ ಓಷಧಿ ಬಳಸುತ್ತಿಲ್ಲ: ಡಾ.ಆರ್.ಅಬ್ದುಲ್ಲಾ ಸ್ಪಷ್ಟನೆ
No expired medicine is being used in Kurugodu Community Health Centre: Dr.R.Abdullah Clarified
ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮುಗಿದ ಯಾವುದೇ ಓಷಧಿ ಬಳಸುತ್ತಿಲ್ಲ: ಡಾ.ಆರ್.ಅಬ್ದುಲ್ಲಾ ಸ್ಪಷ್ಟನೆ
ಬಳ್ಳಾರಿ 30: ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮೀರಿದ ಯಾವುದೇ ಓಷಧಿಗಳನ್ನು ಸಾರ್ವಜನಿಕರಿಗೆ ವಿತರಣೆಯಾಗುತ್ತಿಲ್ಲ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಾಟ್ಸಾಫ್ ಗ್ರೂಪ್‌ಗಳಲ್ಲಿ ಕುರುಗೋಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವಧಿ ಮೀರಿದ ಓಷಧಿಗಳನ್ನು ವಿತರಿಸಲಾಗುತ್ತಿದ್ದು, ಅದರಲ್ಲೂ ಟ್ರೊಮೊಡೊಲ್ ಹೈಡ್ರೋಕ್ಲೋರಿಡ್ (50ಮಿ.ಲಿ) ಇಂಜೆಕ್ಷನ್ ಕೊಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆಯಂತೆ, ಡಾ.ಅಬ್ದುಲ್ಲಾ ಅವರು ಶನಿವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಓಷಧಿ ದಾಸ್ತಾನು ವಿಭಾಗ, ಇಂಜೆಕ್ಷನ್ ನೀಡುವ ಸ್ಥಳ ಮತ್ತು ವೈದ್ಯರು ರೋಗಿಗಳನ್ನು ಪರೀಕ್ಷಿಸುವ ಸ್ಥಳ ಪರೀಶೀಲಿಸಿದಾಗ ಯಾವುದೇ ಅವಧಿ ಮೀರಿದ ಓಷಧಿಗಳನ್ನು ನೀಡಿರುವ ಕುರಿತು ಮತ್ತು ದಾಸ್ತಾನು ವಿತರಣೆ ಮಾಡಿರುವ ಕುರಿತು ಯಾವುದೇ ದಾಖಲಾತಿಗಳಲ್ಲಿ ನಮೂದಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹೆಸರು ಉಲ್ಲೇಖ ಮಾಡಿರುವ ಓಷಧಿಯು ಪ್ರಸ್ತುತ ಅವಧಿ ಮೀರದೇ ಇರುವುದು ಕಂಡುಬಂದಿದೆ, ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅನಗತ್ಯವಾಗಿ ತಪ್ಪು ಮಾಹಿತಿ ನೀಡುವ ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ತಪ್ಪು ಮಾಹಿತಿ ಒದಗಿಸಬಾರದು.
ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಓಷಧಿ ಪಡೆಯುವಂತೆ ಮತ್ತು ಯಾವುದೇ ಅನುಮಾನವಿಲ್ಲದೇ ವೈದ್ಯರು ಸೂಚಿಸುವ ಓಷಧಿ ತೆಗೆದುಕೊಳ್ಳಲು ತಿಳಿಸಿದ್ದಾರೆ ಮತ್ತು ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವವರ ಬಗ್ಗೆ ತಕ್ಷಣವೇ ಮಾಹಿತಿ ನೀಡಲು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಜವಳಿ, ಪ್ರಸೂತಿ ತಜ್ಞರಾದ ಡಾ.ಆಶಿಯಾ ಬೇಗಮ್, ಓಷಧಿ ಅಧಿಕಾರಿ ಶೇಷಗಿರಿ ದಾನಿ, ಪ್ರಕಾಶ್, ಶ್ರೀನಿವಾಸರೆಡ್ಡಿ ಮುಂತಾದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 