ಜೆಡಿಎಸ್ ಜೊತೆ ಹೋಗಲು ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು 12: ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿ ಸಾಂದಭರ್ಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಪಪಡಿಸಲಾಗಿದೆ. 

  ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ  ಸರಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ. 

 ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ. 

 ಸರಕಾರ  ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಜೆಡಿಎಸ್ನ ಸಚಿವ ಸಾ.ರಾ.ಮಹೇಶ್ ಗುರುವಾರ ರಾತ್ರಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.