ಲೋಕದರ್ಶನ ವರದಿ
ವಿಜಯಪುರ 05: ರಾಜ್ಯ ಸಕರ್ಾರ ಗಭರ್ೀಣಿ ಮಹಿಳೆಯರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಮಾತೃಶ್ರೀ ಯೋಜನೆಯಡಿಯ ಸೌಲಭ್ಯಗಳನ್ನು ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳಾದ ಮೊಹ್ಮದ ಮೊಹಸೀನ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಭಿವೃದ್ದಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಾತೃಶ್ರೀ ಯೋಜನೆಯಡಿ ಗಭರ್ೀಣಿ ಮಹಿಳೆಯರಿಗೆ ಮೂರು ಹಂತದಲ್ಲಿ ತಲಾ 2 ಸಾವಿರ ರೂ.ಗಳಂತೆ ಒಟ್ಟು 6 ಸಾವಿರ ರೂ. ಪ್ರೊತ್ಸಾಹಧನ ನೀಡುವ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯ ಲಾಭ ಅರ್ಹ ಮಹಿಳೆಯರಿಗೆ ದೊರೆಯಲು ಅನುಕೂಲವಾಗುವಂತೆ ನಿಗದಿತ ನಮೂನೆಯ ಅಜರ್ಿಗಳನ್ನು ಪಡೆದು ಸಕಾಲಕ್ಕೆ ಈ ಸೌಲಭ್ಯ ಅವರಿಗೆ ದೊರೆಯುವಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದರ್ೇಶಕರಿಗೆ ಸೂಚನೆ ನೀಡಿದರು.
ಈ ಯೋಜನೆಯಡಿ ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಹತ್ತು ಸಾವಿರ ಅರ್ಹ ಫಲಾನುಭವಿಗಳ ಅಜರ್ಿ ಪಡೆಯುವ ಜೊತೆಗೆ ಅಂಗನವಾಡಿ ಕೇಂದ್ರಗಳಲ್ಲಿ ಈಗಾಗಲೇ ಮಾತೃಪೂರ್ಣ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವ ಜಿಲ್ಲೆಯ ಅರ್ಹ ಗಭರ್ೀಣಿ ಮಹಿಳೆಯರನ್ನು ಈ ಯೋಜನೆಯಡಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದರ್ೇಶಕರು ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಗಂಭೀರವಾಗಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಶಾಲಾ ಕೊಠಡಿಗಳ ನಿಮರ್ಾಣಕ್ಕೆ ಸಂಬಂಧಪಟ್ಟಂತೆ ಪಂಚಾಯತ್ರಾಜ್ ಇಂಜಿನೀಯರಿಂಗ್ ವಿಭಾಗದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರು ಹಾಗೂ ಪಿಆರ್ಇಡಿ ಇಲಾಖೆ ಅಧಿಕಾರಿಗಳ ಮಧ್ಯೆ ಸಮನ್ವಯ ಕೊರತೆ ಕಾಣುತ್ತಿದ್ದು, ಈ ಹಿನ್ನಲೆಯಲ್ಲಿ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಉಪ ಕಾರ್ಯದಶರ್ಿಗಳು ಈ ಕುರಿತು ಪರಿಶೀಲನೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆ ಮಾಡಲಾಗಿರುವ ಫಲಾನುಭವಿಗಳ ಮಾಹಿತಿ, ಈವರೆಗೆ ಕೊರೆಯಿಸಲಾದ ಕೊಳವೆಬಾವಿಗಳ ಮಾಹಿತಿ, ವಿವಿಧ ಸಲಕರಣೆ, ಸಾಮಗ್ರಿಗಳ ವಿತರಣೆ ಮತ್ತು ಯಂತ್ರಗಳಿಗೆ ವಿದ್ಯುತ್ ಸಂಪರ್ಕದ ಮಾಹಿತಿ ಸೇರಿದಂತೆ ಸದ್ಬಳಕೆಯಾಗಿರುವ ಅನುದಾನದ ವರದಿಯನ್ನು ಸಹ ಸಂಬಂಧಪಟ್ಟ ಅಧಿಕಾರಿಗಳು ಸಲ್ಲಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಸೇರಿದಂತೆ ವಿವಿಧ ಸಮುದಾಯ ಭವನಗಳಿಗೆ ಜಮೀನು ಇದ್ದಲ್ಲಿ ತಕ್ಷಣ ಒದಗಿಸಬೇಕು. ಮಂಜೂರಾತಿಯಾಗಿ ಜಮೀನು ಇಲ್ಲದಿದ್ದಲ್ಲಿ ಹಾಗೂ ದಾಖಲಾತಿಗಳು ನೀಡದಿದ್ದಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಅವಶ್ಯಕ ನೀರು ಪೂರೈಕೆ ಮಾಡಬೇಕು. ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಬಾಕಿ ಇರುವ ಫೋಡಿ ಪ್ರಕರಣಗಳನ್ನು ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದ ಅವರು, ಸಾರಿಗೆ ಇಲಾಖೆಯಿಂದ ತಾಳಿಕೋಟೆ ಹಾಗೂ ಇಂಡಿ ಬಸ್ ನಿಲ್ದಾಣ ನಿಮರ್ಾಣಕ್ಕೆ ಸಂಬಂಧಪಟ್ಟ ಸೂಕ್ತ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ, ಶಂಕುಸ್ಥಾಪನೆ ಹಂತದಲ್ಲಿರುವ ಕಾಮಗಾರಿಗಳು, ಉದ್ಘಾಟನೆ ಹಂತದಲ್ಲಿರುವ ಕಾಮಗಾರಿಗಳು, ಆರಂಭವಾಗಿರುವ ಹಾಗೂ ಆರಂಭಿಸದೇ ಇರುವ ಕಾಮಗಾರಿಗಳ ಬಗ್ಗೆ ಎಲ್ಲ ಇಲಾಖಾಧಿಕಾರಿಗಳು ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಅನುದಾನ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸಿಆರ್ ವರದಿಯಲ್ಲಿ ನಮೂದು ಮಾಡಲಾಗುವುದು. ಅದರಂತೆ ಅಭಿವೃದ್ದಿ ಕಾರ್ಯಗಳ ಅನುಷ್ಠಾನದ ಜವಾಬ್ದಾರಿ ಹೊಂದಿರುವ ಪಿಆರ್ಇಡಿ, ಕನರ್ಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮ ಹಾಗೂ ನಿಮರ್ಿತಿ ಕೇಂದ್ರದೊಂದಿಗೆ ಆಯಾ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.