ಡಿ.29 ರಂದು ಗೆಜೆಟೆಡ್ ​‍್ರೊಬೇಷನರ​‍್ಸ‌ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಪರೀಕ್ಷೆ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚನೆ

Notice to conduct the examination transparently and systematically for the posts of Gazetted Probat


ಡಿ.29 ರಂದು  ಗೆಜೆಟೆಡ್ ​‍್ರೊಬೇಷನರ​‍್ಸ‌ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಪರೀಕ್ಷೆ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸೂಚನೆ 

 

ಹಾವೇರಿ 27:   ಕರ್ನಾಟಕ ಲೋಕಸೇವಾ ಆಯೋಗದಿಂದ  2023-24ನೇ ಸಾಲಿನ ಗೆಜೆಟೆಡ್ ​‍್ರೊಬೇಷನರ​‍್ಸ‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಡಿಸೆಂಬರ್ 29 ರಂದು ಹಾವೇರಿ ನಗರದ 4 ಕೇಂದ್ರಗಳಲ್ಲಿ  ಜರುಗಲಿದ್ದು, ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ  ಡಾ.ಎಲ್‌.ನಾಗರಾಜ ಅವರು ಸೂಚನೆ ನೀಡಿದರು.  

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಗುರುವಾರ  ಸಂಜೆ ಗೆಜೆಟೆಡ್ ಪ್ರೊಬೇಷನರ್ಸ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಪೂರ್ವಭಾವಿ  ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು,  ಡಿಸೆಂಬರ್ 29 ರಂದು ನಗರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ   ಬೆಳಿಗ್ಗೆ  10 ರಿಂದ 12 ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ ಎಂದರು. 

ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ  ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ  ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. 

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡ ಅಧಿಕಾರಿಗಳು, ಉಪನ್ಯಾಸಕರು ಪರೀಕ್ಷಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರದ ಹೊರ ವಲಯ ಹಾಗೂ ಕೊಠಡಿಯ ಒಳಗೆ ಶಿಸ್ತುಬದ್ಧವಾಗಿ ಪರೀಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಸಬೇಕು ಎಂದು ನಿರ್ದೇಶನ ನೀಡಿದರು. 

ಸಿಸಿ ಟಿವಿ ಕಡ್ಡಾಯ: ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ , ಜಾಮರ್ ಅಳವಡಿಕೆ ಹಾಗೂ ಕೊಠಡಿಯೊಳಗೆ ಗಡಿಯಾರ  ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಪರೀಕ್ಷಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಸೂಕ್ತ ಪೀಠೋಪಕರಣ ಒಳಗೊಂಡಂತೆ ಮೂಲಭೂತ ಸೌಕರ್ಯ ಒದಗಿಸಬೇಕು.  ಪರೀಕ್ಷಾ ವೀಕ್ಷಕರು ಈ ಕುರಿಂತೆ ಪೂರ್ವ ಪರೀಶೀಲನೆ ನಡೆಸಿ  ನಿಯಮಾನುಸಾರ ಮೂಲ ಸೌಕರ್ಯಗಳ ಕುರಿತಂತೆ ಖಚಿತಪಡಿಸಿಕೊಳ್ಳಲು ಸೂಚನೆ ನೀಡಿದರು. 

ಪರೀಕ್ಷೆಗೆ ನಿಯೋಜಿತ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆಯವರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದ ಅವರು, ಸಿಸಿ ಕ್ಯಾಮರಾ ಕಣ್ಗಾವಲಿನಲ್ಲೇ ಪ್ರಶ್ನೆ ಪತ್ರಿಕೆ ತೆರೆಯುವುದು ಹಾಗೂ ಉತ್ತರ ಪತ್ರಿಕೆ ಬಂಡಲ್ ಮಾಡಬೇಕು ಎಂದು ಸೂಚನೆ ನೀಡಿದರು. 

ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ  ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್‌ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು. 

ವಸ್ತ್ರ ಸಂಹಿತೆ: ಪರೀಕ್ಷಾರ್ಥಿಗಳು ತುಂಬು ತೋಳಿನ ಶರ್ಟ್‌, ಟಿ ಶರ್ಟ್‌, ಪದರುಗಳುಳ್ಳ ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ. ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ(ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್‌ ಧರಿಸುವುದನ್ನು ನಿಷೇಧಿಸಲಾಗಿದೆ. ಸರಳ ಚಪ್ಪಲಿ ಧರಿಸಬೇಕು. 

ಪರೀಕ್ಷೆಗೆ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೂಲ ಪರೀಕ್ಷಾ ಪ್ರವೇಶ ಪತ್ರ ಹಾಗೂ ಐಡಿ ಕಾರ್ಡ್‌ ತರಬೇಕು ಎಂದರು. 

200 ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ 200  ಮೀಟರ್‌ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್‌ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು. 

ಪರೀಕ್ಷಾ ಕೇಂದ್ರಗಳು: ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಾವೇರಿ ನಗರದ ಜಿ.ಎಚ್‌. ಕಾಲೇಜ್,  ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು,   ಇಜಾರಿಲಕಮ್ಮಾಪೂರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.  

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.