ಬೆಳಗಾವಿ, 16: ಬಾಲ್ಯವಿವಾಹ ತಡೆಗೆ ಸಂಬಂಧಿಸಿದಂತೆ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವುದರ ಜತೆಗೆ ಯಾವ ಸಮುದಾಯದಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡುಬರುತ್ತವೆಯೋ ಅಂತಹ ಸಮುದಾಯಗಳ ಮುಖಂಡರನ್ನು ಪ್ರತ್ಯೇಕವಾಗಿ ಕರೆದು ಸಭೆ ನಡೆಸುವ ಮೂಲಕ ಬಾಲ್ಯವಿವಾಹಗಳನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲ್ಯ ವಿವಾಹಗಳನ್ನು ತಡೆಗಟ್ಟುವಿಕೆ, ಗೆಳತಿ ವಿಶೇಷ ಚಿಕಿತ್ಸಾ ಘಟಕ ಹಾಗೂ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ(ಮೇ.16) ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ರಾಯಬಾಗ ಹಾಗೂ ಅರಭಾವಿಯಲ್ಲಿ ನಿದರ್ಿಷ್ಟ ಸಮುದಾಯಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟಲು ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸಬೇಕು.
ಶಾಲೆಗಳಲ್ಲಿ ರಚಿಸಲಾಗುವ ಶಾಲಾ ಸಂಸತ್ತು ಮೂಲಕವೂ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಕೌಟುಂಬಿಕ ಕಲಹ-ಇತ್ಯರ್ಥಕ್ಕೆ ನಿದರ್ೇಶನ:
ಬಾಕಿ ಉಳಿದಿರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಆಪ್ತ ಸಮಾಲೋಚನೆ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ನಿದರ್ೇಶನ ನೀಡಿದರು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದವರಿಗೆ ಸಮಿತಿಯು ಆಪ್ತಸಮಾಲೋಚನೆಗೆ ಹಾಜರಾಗುವಂತೆ ಮೂರು ನೋಟಿಸ್ ನೀಡಬಹುದು. ಒಂದು ವೇಳೆ ಅವರು ಹಾಜರಾಗದಿದ್ದರೆ ಪ್ರಕರಣವನ್ನು ಪೊಲೀಸ್ ಇಲಾಖೆಗೆ ವಗರ್ಾಯಿಸಬಹುದು ಎಂದರು.
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಗತ್ಯ ಸಹಕಾರ ನೀಡುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೂ ತಿಳಿಸಿದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅರ್ಹ ಫಲಾನುಭವಿಗಳನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತ ರ ಮೂಲಕ ಗುರುತಿಸುವ ಕೆಲಸವಾಗಬೇಕು. ಆಧಾರ್ ಕಾರ್ಡ ಅಥವಾ ಇತರೆ ದಾಖಲಾತಿ ಕೊರತೆ ಕಾರಣಕ್ಕೆ ಯವುದೇ ಅರ್ಹ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವಂತಾಗಬಾರದು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿ ತೋರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡ ನಿಮರ್ಾಣಕ್ಕೆ ಜಾಗೆ ಲಭ್ಯವಿರುವ ಕಡೆಗಳಲ್ಲಿ ತಕ್ಷಣವೇ ಅಂಗನವಾಡಿ ಕಟ್ಟಡಗಳ ನಿಮರ್ಾಣಕ್ಕೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೆಲಸ ಬಾಕಿ ಉಳಿಯಬಾರದು ಎಂದರು.
ಜಿಲ್ಲಾ ಆಸ್ಪತ್ರೆಯಲ್ಲಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕದ ಮೂಲಕ ಸಂತ್ರಸ್ತರಿಗೆ ನೀಡಲಾಗುತ್ತಿರುವ ವೈದ್ಯಕೀಯ, ಕಾನೂನು ಮತ್ತು ಆಪ್ತಸಮಾಲೋಚನೆ ಸೇವೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಅತ್ಯಾಚಾರ ಅಥವಾ ಕೌಟುಂಬಿಕ ಕಲಹ ಪ್ರಕರಣಗಳು ವರದಿಯಾದಾಗ ಸಂಬಂಧಪಟ್ಟ ಅಧಿಕಾರಿಗಳು ನಿಯಮಾವಳಿ ಪ್ರಕಾರ ತುತರ್ು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಶಾಲ್ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾನ ಇಲಾಖೆಯ ಉಪ ನಿದರ್ೇಶಕರಾದ ರಾಜೇಂದ್ರ ಬೇಕಲ್ ಅವರು, ಬಾಲ್ಯವಿವಾಹ ತಡೆಗಟ್ಟುವಿಕೆ, ಗೆಳತಿ ವಿಶೇಷ ಚಿಕಿತ್ಸಾ ಘಟಕದ ಕಾರ್ಯನಿರ್ವಹಣೆ, ಸ್ಥೈರ್ಯ ನಿಧಿ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಅನುಷ್ಠಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಪ್ಪಾಸಾಹೇಬ್ ನರಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇ ಶಕರಾದ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾಗಿರುವ ಭಾರತಿ ಶೆಟ್ಟರ್, ಜಿಲ್ಲಾ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಉಪನಿದರ್ೇಶಕ ಗುರುನಾಥ ಕಡಬೂರ, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ನಾಗರತ್ನಾ ರಾಮಗೌಡರ, ಅಖಿಲಾ ಪಠಾಣ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸ್ಥೈರ್ಯ ನಿಧಿ-ಪರಿಹಾರ ವಿತರಣೆ:
ಇದಕ್ಕೂ ಮುಂಚೆ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್. ಅವರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿ ಮೃತರಾಗಿರುವವರ ವಾರಸುದಾರರಿಗೆ ಸ್ಥೈರ್ಯ ನಿಧಿಯಡಿ ತಲಾ ಒಂದು ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಮೃತರ ವಾರಸುದಾರರಾಗಿರುವ ಬೆಳಗಾವಿ ಗಾಂಧಿನಗರದ ನೂರಜಹಾನ್ ಶಂಶೇರ್ ದೇಸಾಯಿ ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ಮುನೀರಾ ಶೇಖ್ ಅವರು ಚೆಕ್ ಸ್ವೀಕರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿದರ್ೇಶಕರಾದ ರಾಜೇಂದ್ರ ಬೇಕಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾಗಿರುವ ಭಾರತಿ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.91 ಅಂಕ ಗಳಿಸಿರುವ ಸವದತ್ತಿಯ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿ ನಿಯನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿದರು.