ಕುಷ್ಠ ರೋಗ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಮೂಡಿಸಲು ಸೂಚನೆ

ವಿಜಯಪುರ 16:    ಕುಷ್ಠ ರೋಗ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಜನರಿಗೆ ಡಂಗುರದ ಮೂಲಕ ಅರಿವು ಮೂಡಿಸಬೇಕು. ಎಲ್ಲ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಕುರಿತು ಅರಿವು ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಹಶೀಲ್ದಾರ ರವೀಚಂದ್ರನ್ ಸೂಚನೆ ನೀಡಿದರು. 

ನಗರದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಲಾದ ತಾಲೂಕಾ ಮಟ್ಟದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಎಲ್ಲ ಇಲಾಖೆಗಳು ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾತಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು. 

ತಾಲೂಕಾ ಆರೋಗ್ಯ ಅಧಿಕಾರಿ ಡಾ.ಗುಂಡಬಾವಡಿ ಅವರು ಮಾತನಾಡಿ, ಕುಷ್ಠರೋಗದ ಕುರಿತು ಅರಿವು ಮೂಡಿಸುವ ಕಾರ್ಯವನ್ನು ಮಾಡುವುದರ ಜೊತೆಗೆ ರೋಗದ ಗುಣ ಲಕ್ಷಣಗಳ ಕುರಿತು ಮಾಹಿತಿ ನೀಡಬೇಕು. ಸಾಮಾನ್ಯವಾಗಿ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಚರ್ಮದ ಮೇಲೆ ಕಂಡು ಬರುವ ತಿಳಿಬಿಳಿ ತಾಮ್ರ ವರ್ಣದ ಮಚ್ಚೆ ಕಂಡು ಬಂದಾಗ ಇದರ ಮೇಲೆ ಸ್ಪರ್ಶ ಜ್ಞಾನ ಇಲ್ಲದೇ ಇರುವುದು, ಆ ಜಾಗದಲ್ಲಿ ಕೂದಲು ಬರದೇ ಇರುವುದು ಹಾಗೂ ಬೆವರು ಬರೆದೆ ಇರುವುದು ಕುಷ್ಠರೋಗದ ಲಕ್ಷಣಗಳಾಗಿವೆ. ಇಂತಹ ಸಮಯದಲ್ಲಿ ಆರೋಗ್ಯ ಕೇಂದ್ರಕ್ಕೆ ಅಥವಾ ಆಶಾ ಕಾರ್ಯಕತರ್ೆಯರು, ಅಥವಾ ಕಿರಿಯ ಆರೋಗ್ಯ ಸಹಾಯಕಿಯರನ್ನು ಸಂಪಕರ್ಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಸಹಾಯಕ ಕುಷ್ಠರೋಗ ಅಧಿಕಾರಿಗಳು, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ನಗರ ವಲಯ ಹಾಗೂ ಗ್ರಾಮೀಣ ವಲಯ, ನಗರ ಹಾಗೂ ಗ್ರಾಮೀಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕಾ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ್ ಸ್ವಾಗತಿಸಿದರು. ಆಪ್ತ ಸಮಾಲೋಚಕ ಗೋಪಾಲ ರಬಕವಿ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.