ಮತದಾರರ ನೋಂದಣಿ ಹೆಚ್ಚಿಸಲು ಕಾರ್ಯಪ್ರವೃತ್ತರಾಗಲು ಸೂಚನೆ

ಲೋಕದರ್ಶನ ವರದಿ

ವಿಜಯಪುರ 02; ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಮತದಾರರ  ನೋಂದಣಿ  ಪ್ರಮಾಣವನ್ನು ಹೆಚ್ಚಿಸುವ ಜೊತೆಗೆ ಹೆಚ್ಚಿನ ಮತದಾನ ಮಾಡಲು ಪ್ರೋತ್ಸಾಹಿಸುವ ದಿಸೆಯಲ್ಲಿ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯ ಅಧಿಕಾರಿಗಳು ಸನ್ನದ್ಧಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಸೂಚಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ  ವಹಿಸಿದ್ದ ಅವರು, ಜಿಲ್ಲೆಯ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿವಿಧ ಪ್ರಚಾರ ಸಾಮಗ್ರಿಗಳಾದ ಬ್ಯಾನರ್, ಪೋಸ್ಟರ್, ಕರಪತ್ರ, ಭಿತ್ತಿಪತ್ರಗಳನ್ನು ಮುದ್ರಿಸಿ ಮತದಾರರ ನೊಂದಣಿ ಮತ್ತು ಕಡ್ಡಾಯ ಮತದಾನ ಮಾಡುವ ಕುರಿತಂತೆ ಜನ ಸಾಂಧತರ್ೆಯುಳ್ಳ ಪ್ರದೇಶಗಳಲ್ಲಿ ಪ್ರಚುರಪಡಿಸುವ ಬಗ್ಗೆ ಕ್ರೀಯಾಯೋಜನೆಯನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದರು. 

ಅದರಂತೆ ಈ ಹಿಂದಿನ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಸೂಕ್ತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹಾಸ್ಯ ಕಾರ್ಯಕ್ರಮಗಳ ಮೂಲಕ, ವಿವಿಧ ಚಲನಚಿತ್ರಮಂದಿರಗಳ ಮೂಲಕ, ಸಂಚಾರಿ ವಾಹನಗಳ ಮೂಲಕ, ಜಿಂಗಲ್ಸ್ಗಳ ಮೂಲಕ ವಿವಿಧ ಜಾಥಾ ಕಾರ್ಯಕ್ರಮಗಳ ಮೂಲಕ ವಿವಿಧ ಕೈಗಾರಿಕೆಗಳ ಕಾಮರ್ಿಕರಲ್ಲಿ ಅರಿವು ಮೂಡಿಸುವ ಕುರಿತಂತೆ ಖಚರ್ುವೆಚ್ಚಗಳ ಯೋಜನಾ ವರದಿಯನ್ನು ಸಂಬಂಧಿಸಿದ ಅಧಿಕಾರಿಗಳು ಸಲ್ಲಿಸಬೇಕು.  

ಜಿಲ್ಲೆಯ ಸಕರ್ಾರೇತರ ಸಂಘ-ಸಂಸ್ಥೆಗಳ ಸಹಕಾರ ಪಡೆಯಬೇಕು ಹಾಗೂ ಅಲೆಮಾರಿ ಮತ್ತು ಅರೆ-ಅಲೆಮಾರಿ ಜನಾಂಗಗಳ ಸಮೀಕ್ಷೆ ನಡೆಸಿ, ಮತದಾರರ ನೊಂದಣಿ ಮತ್ತು ತಪ್ಪದೇ ಮತದಾನ ಮಾಡುವ ಕುರಿತಂತೆ ಜಾಗೃತಿ ಮೂಡಿಸುವ ಕುರಿತು ಪೂರ್ವಭಾವಿ ವರದಿಗಳನ್ನು ಸಲ್ಲಿಸುವಂತೆ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದಶರ್ಿ ಅಮರೇಶ ನಾಯಕ, ಮುಖ್ಯ ಯೋಜನಾಧಿಕಾರಿ ಕುಂಬಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.