ಪೋಷಣಾ ಮಾಸಾಚರಣೆ, ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ
Nutrition Month Celebration, Limited Program for Pregnant and Lactating Women
ಪೋಷಣಾ ಮಾಸಾಚರಣೆ, ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ
ಯರಗಟ್ಟಿ, 24 ; ಮಹಿಳೆಯರು ತಮ್ಮ ಜತೆಗೆ ಮಕ್ಕಳನ್ನು ಆರೋಗ್ಯವಂತರನ್ನಾಗಿಸುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಎಸಿಡಿಓ ವಾಸಂತಿ ಹಿರೇಮಠ ಹೇಳಿದರು.
ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಪೋಷಣಾ ಮಾಸಾಚರಣೆ, ಗರ್ಭಿಣಿ, ಬಾಣಂತಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಅನ್ನ ಪ್ರಾಶನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
‘ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣಾ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮವಾಗಿದ್ದು ಬಾಲಕಿಯರು, ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮವಾಗಿದ್ದು, ಮಹಿಳೆಯರು ಪೋಷಣಾ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಸಮರ್ಕವಾಗಿ ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದರು.
ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಸ್ತೂರಿ ಕಡೆಮನಿ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪ. ಪಂ. ಇಂಜಿನಿಯರ ವೆಂಕಟೇಶ ಕಾಮಣ್ಣವರ, ಪ. ಪಂ. ಸದಸ್ಯರಾದ ನಿಖಿಲ ಪಾಟೀಲ, ಹನಮಂತ ಹಾರೂಗೊಪ್ಪ, ಅಂಗನವಾಡಿ ಮೇಲ್ವಿಚಾರಕಿ ರಾಜಶ್ರೀ ತರಲಿ, ಪ. ಪಂ. ಅಧಿಕಾರಿಗಳು ಆನಂದ ಬೆಳವಿ, ಕೆ. ಬಿ. ಬೆಣ್ಣಿ, ಮಹಾದಪ್ಪ ಬಡಿಗೇರಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಎಂ. ಅಂಗಡಿ, ಆರೋಗ್ಯ ಇಲಾಖೆ ಅಧಿಕಾರಿಯಾದ ಮಂಜುಳಾ ಈರಗಾರ, ಎಸ್. ಬಿ. ಬೆಂಡಿಗೇರಿ, ಸಿಎಚ್‌ಓ ರೂಪಾ ಹುಗ್ಗಿ ಅಂಗನವಾಡಿ ಕಾರ್ಯಕರ್ತೆಯರಾದ ನಂದಾ ಮುರಗೋಡ, ಲಲಿತಾ ಕರ್ಜಗಿಮಠ, ಜ್ಯೋತಿ ಮದ್ದಾನಿ, ಮಿಣಾಕ್ಷಿ ಚನ್ನಮೇತ್ರಿ, ಮಮತಾಜ ನದಾಫ, ಹುಸೇನಬಿ ಹುಕ್ಕೇರಿ, ಶೈಲಾ ಕಿಲಾರಿ, ಗುರವ್ವ ಹೊಸಕೋಟಿ, ಮಹಾದೇವಿ ಹೊರಟ್ಟಿ ಮತ್ತು ಅಂಗನವಾಡಿ ಸಹಾಯಕಿಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 