ಆರೋಗ್ಯಕರ ಜೀವನಕ್ಕೆ ಪೌಷ್ಠಿಕ ಆಹಾರ ಅವಶ್ಯಕ
Nutritious food is essential for a healthy life.
ಆರೋಗ್ಯಕರ ಜೀವನಕ್ಕೆ ಪೌಷ್ಠಿಕ ಆಹಾರ ಅವಶ್ಯಕ
ಕೊಪ್ಪಳ 02:ಪೌಷ್ಠಿಕ ಆಹಾರ ಮತ್ತುಆರೋಗ್ಯಕರಜೀವನಶೈಲಿಯನ್ನು ಅಳವಡಿಸಿಕೊಂಡು ಎಲ್ಲರೂ ಸದೃಢರಾಗಿರಬೇಕುಎಂದುಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶದರಗದಅವರು ಹೇಳಿದರು.
ಮಂಗಳವಾರದಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಕೊಪ್ಪಳ ನಗರದದೇವರಾಜಅರಸ ಕಾಲೋನಿ ಅಂಗನವಾಡಿಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪೌಷ್ಟಿಕ ಆಹಾರ ದಿನ ಹಾಗೂ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌಷ್ಟಿಕ ಆಹಾರ ಹಾಗೂ ಉತ್ತಮಜೀವನ ಶೈಲಿಯನ್ನುಎಲ್ಲರೂ ಅಳವಡಿಸಿಕೊಳ್ಳಬೇಕು.ಮುಖ್ಯವಾಗಿಎಲ್ಲಾಗರ್ಭಿಣಿ, ಬಾಣಂತಿಯರುಆರೋಗ್ಯಕರ ಮಗುವಿಗೆ ಜನ್ಮ ನೀಡುವಲ್ಲಿ ಪೌಷ್ಠಿಕ ಆಹಾರ ಮತ್ತುಆರೋಗ್ಯಕರಜೀವನಶೈಲಿ ಪ್ರಮುಖ ಪಾತ್ರ ವಹಿಸುತ್ತದೆಎಂದುಅವರು ಹೇಳಿದರು.ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಉಪನಿರ್ದೇಶಕರಾದ ಪರಶುರಾಮ ಶೆಟ್ಟೆಪ್ಪನವರ, ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿಕೋಟಗಾರ, ಗರ್ಭಿಣಿ, ಬಾಣಂತಿಯರು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿಕಾರ್ಯಕರ್ತೆಯರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 