ನ.11 ರಂದು ವೀರ ವನಿತೆ ಓನಕೆ ಓಬವ್ವ ಜಯಂತಿ ಕಾರ್ಯಕ್ರಮ
Obavva Jayanti program
ಬಳ್ಳಾರಿ,ನ.04: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ವೀರ ವನಿತೆ ಓನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಛಲವಾದಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಕುಮಾರ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಸಾಹಿತಿ ಎನ್.ಡಿ.ವೆಂಕಮ್ಮ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಸ್.ಲಕ್ಷ್ಮೀ ಪವನ್ ಕುಮಾರ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 