ವಾಕರಸಾಸಂ ಹುಬ್ಬಳ್ಳಿಯಲ್ಲಿ ಓಬವ್ವಳ ಜಯಂತಿ ಆಚರಣೆ
Obavvala Jayanti Celebration in Vakarasasam Hubli
ಹುಬ್ಬಳ್ಳಿ 11: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಜಯಂತಿಯನ್ನು ದಿ. 11ಂದು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿರೂಪಾಕ್ಷ ಕಟ್ಟಿಮನಿರವರು, ಒಬ್ಬ ಸಾಮಾನ್ಯ ಮಹಿಳೆ ತನ್ನ ರಾಜ್ಯವನ್ನು ಹೇಗೆ ಕಾಪಾಡಬಹುದು ಎಂಬುದನ್ನು ತೋರಿಸಿಕೊಟ್ಟ ವೀರನಾರಿ, ಒನಕೆ ಓಬವ್ವಳು ಹೈದರಾಲಿ ಸೈನಿಕರನ್ನು ಒನಕೆಯಿಂದ ಹೊಡೆದುರುಳಿಸಿ ಸಾಹಸ ಮೆರೆದವಳು. ವೀರ ವನಿತೆ ಓಬವ್ವಳ ಜಯಂತಿ ಆಚರಣೆ ಮಾಡುವ ಮೂಲಕ ಅವರ ಧೈರ್ಯ ಹಾಗೂ ಸಾಹಸದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ, ಗಣೇಶ ರಾಠೋಡ್, ಶಶಿಧರ ಕುಂಬಾರ, ಜಗದಂಬಾ ಕೋಪರ್ಡೆ, ಸುಮನಾ.ಯು, ನವೀನಕುಮಾರ ತಿಪ್ಪಾಜಿ ಹನುಮನಗೌಡರ, ದಯಾನಂದ ಪಾಟೀಲ, ಎಮ್.ಎಮ್.ಶಂಕರ್ಪ ಮತ್ತು ಕೇಂದ್ರ ಕಛೇರಿಯ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿರೂಪಾಕ್ಷ ಕಟ್ಟಿಮನಿರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 