ಅಶ್ಲೀಲ ಹಾಡು, ಹಾಸ್ಯ ಕಾರ್ಯಕ್ರಮಗಳ ಮೇಲೆ ನಿರ್ಬಂಧ ಹಾಕಬೇಕಿದೆ: ಪ್ರದೀಪ ಹಿರೇಮಠ
Obscene songs and comedy shows should be banned: Pradeep Hiremath
ಜಮಖಂಡಿ 04: ಉತ್ತರ ಕರ್ನಾಟಕದ ಅಶ್ಲೀಲ ಜಾನಪದ ಹಾಡುಗಳು, ಚಲನಚಿತ್ರ ಹಾಡುಗಳು, ನೃತ್ಯಗಳು, ಹಾಸ್ಯ ಕಾರ್ಯಕ್ರಮಗಳು, ರಿಯಾಲಿಟಿ ಶೋಗಳು ಹಾಗೂ ಚಲನಚಿತ್ರಗಳಲ್ಲಿ ಪ್ರದರ್ಶಿಸಲಾಗುತ್ತಿರುವ ಕಾರಣ ಮಕ್ಕಳ ಹಾಗೂ ಮಹಿಳೆಯರ ಮೇಲೆ ಗಂಭೀರವಾದ ದುಷ್ಪರಿಣಾಮ ಭೀರುತ್ತಿರುವುದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ನಾಗಲಕ್ಷ್ಮಿ ಚೌಧರಿ ಅವರು ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಿರ್ಬಂಧ ಹಾಕುವ ಕೆಲಸ ಮಾಡಬೇಕೆಂದು ಜಾನಪದ ಸಾಹಿತಿ ಪ್ರದೀಪ ಹಿರೇಮಠ ಒತ್ತಾಯಿಸಿದ್ದಾರೆ.
ಅಶ್ಲೀಲ ಹಾಡುಗಳು, ನೃತ್ಯಗಳು, ಹಾಸ್ಯ ಕಾರ್ಯಕ್ರಮಗಳು ಅಸಭ್ಯ ದೃಶ್ಯಗಳು ದಿನೇದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಮಾಜದ ಮೇಲೆ, ದುಷ್ಪರಿಣಾಮ ಉಂಟಾಗುತ್ತಿದೆ. ಇಂತಹ ಅಶ್ಲೀಲ ಗೀತೆಗಳು ಮತ್ತು ಹಾಸ್ಯಗಳಿಂದ ಮಕ್ಕಳ ಮನಸ್ಸು ತಪ್ಪು ದಾರಿಗೆ ಹೋಗುವ ಭೀತಿ ಹೆಚ್ಚಾಗಿದೆ. ಜೊತೆಗೆ ಹೆಣ್ಣುಮಕ್ಕಳು ಸಾರ್ವಜನಿಕ ಸ್ಥಳಗಳಲ್ಲಿ ತಲೆಯೆತ್ತಿ ನಿರ್ಭಯವಾಗಿ ತಿರುಗಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ನಮ್ಮ ಕನ್ನಡ ನಾಡಿನ ಸಂಸ್ಕೃತಿ, ಮೌಲ್ಯಗಳು ಹಾಗೂ ಸಾಮಾಜಿಕ ಸೌಹಾರ್ದತೆಗೆ ದೊಡ್ಡ ಹೊಡೆತವಾಗುತ್ತಿದೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶ್ಲೀಲ ಹಾಡುಗಳು, ನೃತ್ಯಗಳು ಮತ್ತು ಹಾಸ್ಯಗಳನ್ನು ನಿರ್ಮಿಸಿ ಪ್ರದರ್ಶಿಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು. ಹಾಗೆಯೇ ಮುಂದಿನ ದಿನಗಳಲ್ಲಿ ಇಂತಹ ಅಶ್ಲೀಲ ಕಾರ್ಯಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ನಿಯಂತ್ರಣ ಹಾಗೂ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಇಡೀ ಉತ್ತರ ಕರ್ನಾಟಕದ ಕಲಾವಿದರು ಒಂದಾಗಿ ಬೆಂಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಬೇಕಾದ ಅನಿವಾರ್ಯತೆ ಉಂಟಾಗುತ್ತದೆಂದು ಎಚ್ಚರಿಕೆಯನ್ನು ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 