ಅಧಿಕಾರಿಗಳ ಭರವಸೆ: ಗ್ರಾಪಂ ನೌಕರರ ಪ್ರತಿಭಟನೆ ಹಿಂದಕ್ಕೆ
Officials' promise: Gram Panchayat employees' protest withdrawn
ದೇವರಹಿಪ್ಪರಗಿ 21: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತ್ ನೌಕರರ ನಿರ್ದಿಷ್ಟಾವಧಿ ಪ್ರತಿಭಟನೆ ಹಾಗೂ ಸತ್ಯಾಗ್ರಹವನ್ನು ತಾ.ಪಂ ಇಒ ಭಾರತಿ ಚೆಲುವಯ್ಯ ಅವರ ಭರವಸೆ ಮೇಲೆ ಹಿಂಪಡೆದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ತಾ.ಪಂ ಆವರಣದಲ್ಲಿ ಗುರುವಾರದಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ತಾಲೂಕು ಸಮಿತಿ ಹಾಗೂ ಕರ್ನಾಟಕ ರಾಜ್ಯ ಪಂಚಾಯತ್ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕದ ವತಿಯಿಂದ ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ತಾಲೂಕು ಘಟಕದ ಅಧ್ಯಕ್ಷ ರವಿ ಗೋಟೂರ ಅವರ ನೇತೃತ್ವದಲ್ಲಿ ಪ್ರತಿ ತಿಂಗಳು ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸ್ಥಳಕ್ಕೆ ಆಗಮಿಸಿದ ತಾ.ಪಂ ಇಒ ಭಾರತಿ ಚೆಲುವಯ್ಯ ಅವರು ಗ್ರಾಮ ಪಂಚಾಯಿತಿಗಳ ಪಿಡಿಒ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಐದು ದಿನಗಳ ಸಮಯ ಕೇಳಿದ ಕಾರಣ ಪ್ರತಿಭಟನೆ ಹಿಂಪಡೆಯಲಾಯಿತು.
ತಾ.ಪಂ ಎಡಿ.ಪಿ.ಆರ್ ಶಿವಾನಂದ ಮೂಲಿಮನಿ, ಎಡಿ ಎನ್.ಆರ್. ಜಿ ಶಾಂತಗೌಡ ನ್ಯಾಮಣ್ಣವರ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ತಾಲೂಕು ಘಟಕದ ಅಧ್ಯಕ್ಷ ರವಿ ಗೋಟೂರ, ಕಾರ್ಯದರ್ಶಿ ಪರಶುರಾಮ ಯಲಗೋಡ, ಉದಯಕುಮಾರ ಚರಂತಿಮಠ, ಶಿವಾನಂದ ನಾವಿ, ಸಿ.ಐ.ಯು.ಟಿ ತಾಲೂಕು ಅಧ್ಯಕ್ಷ ಶಿವಾನಂದ ಬಿರಾದಾರ, ಪ್ರಧಾನ ಕಾರ್ಯದರ್ಶಿ ಬಾಬುಸಾಬ ಟಕ್ಕಳಕಿ, ಅಮೀನ್ ಪಟೇಲ ಸೇರಿದಂತೆ ಗ್ರಾಮ ಪಂಚಾಯಿತಿ ವಾಟರ್ ಮ್ಯಾನ್, ಬಿಲ್ ಕಲೆಕ್ಟರ್, ಸ್ವಚ್ಛತಾ ಗಾರರು ಸೇರಿದಂತೆ ಹಲವಾರು ಜನ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 