ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಮನವಿ ಸ್ವೀಕರಿಸಿದ ಅಧಿಕಾರಿಗಳು
Officials accept request for establishment of Vijayapura Government Medical College
ವಿಜಯಪುರ 11: ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಯಾದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್, ಸಚಿವ ಶಿವಾನಂದ ಪಾಟೀಲ್ ಹಾಗೂ ಜಿಲ್ಲಾಧಿಕಾರಿ ಅವರ ಮೂಲಕ ಈ ಮನವಿಯನ್ನು ಸಲ್ಲಿಸಲಾಗಿದ್ದು, ಇದರಲ್ಲಿ ಮುಂದಿನ ಬಜೆಟ್ನಲ್ಲಿ ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯ ಹಣಕಾಸು ಮೀಸಲಿಡುವಂತೆ ಘೋಷಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಇರುವ ಖಾಸಗಿ ವೈದ್ಯಕೀಯ ಕಾಲೇಜುಗಳು ದುಬಾರಿ ಶುಲ್ಕದಿಂದಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಕಡಿಮೆಯಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಜಿಲ್ಲೆಯ ಆರೋಗ್ಯ ಸೇವೆಗಳು ಸುಧಾರಿಸುವುದರ ಜೊತೆಗೆ ಸ್ಥಳೀಯ ಯುವಕರಿಗೆ ಉನ್ನತ ವೈದ್ಯಕೀಯ ಶಿಕ್ಷಣದ ಅವಕಾಶಗಳು ದೊರೆಯಲಿವೆ ಎಂದು ಹೋರಾಟ ಸಮಿತಿ ತಿಳಿಸಿದೆ.ಈ ಹಿಂದೆಯೂ ಹಲವು ಬಾರಿ ಮನವಿಗಳು, ಪ್ರತಿಭಟನೆಗಳು, ಧರಣಿಗಳ ಮೂಲಕ ಒತ್ತಡ ಹೇರಲಾಗಿತ್ತು. ಇದೀಗ ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ಹಣಕಾಸು ಮೀಸಲು ಮತ್ತು ಘೋಷಣೆಗೆ ಆಗ್ರಹಿಸಲಾಗಿದೆ.
ಹೋರಾಟ ಸಮಿತಿಯ ಸದಸ್ಯರು ಈ ಕುರಿತು ಮಾತನಾಡಿ, "ಜಿಲ್ಲೆಯ ಜನರ ಆರೋಗ್ಯ ಮತ್ತು ಶಿಕ್ಷಣದ ಹಕ್ಕನ್ನು ಭದ್ರಪಡಿಸಲು ಸರ್ಕಾರಿ ವೈದ್ಯಕೀಯ ಕಾಲೇಜು ಅತ್ಯಗತ್ಯ. ಸಚಿವರುಗಳ ಮೂಲಕ ಸಲ್ಲಿಸಿರುವ ಮನವಿಯನ್ನು ಮುಖ್ಯಮಂತ್ರಿಗಳು ಪರಿಗಣಿಸಿ ಬಜೆಟ್ನಲ್ಲಿ ಸಕಾರಾತ್ಮಕ ಘೋಷಣೆ ಮಾಡಬೇಕು" ಎಂದು ಒತ್ತಾಯಿಸಿದರು.ಈ ಮನವಿಯ ಪ್ರತಿಗಳನ್ನು ಸಂಬಂಧಿತ ಅಧಿಕಾರಿಗಳಿಗೂ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಸಕಾರಾತ್ಮಕ ಪ್ರತಿಕ್ರಿಯೆ ಬರಲಿದೆ ಎಂಬ ನೀರೀಕ್ಷೆ ಹೋರಾಟಗಾರರದ್ದಾಗಿದೆ.ಈ ಸಂದರ್ಭದಲ್ಲಿ ಎಲ್ಲಾ ಹೋರಾಟಗಾರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 