ಅಧಿಕಾರಿಗಳು ನಿಖರ ಮಾಹಿತಿ ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

ಅಧಿಕಾರಿಗಳು ನಿಖರ ಮಾಹಿತಿ ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ Officials should provide accurate information - District Collector Dr. Suresh B. Itnal

 

        ಕೊಪ್ಪಳ  23:  ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಯನ್ನು ತಯಾರಿಸುವ ಸಂಬಂಧ ಸಂಪನ್ಮೂಲ ವ್ಯಕ್ತಿಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ನಿಖರ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. 

ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಜೆ.ಎಚ್‌. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ  ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಯನ್ನು ತಯಾರಿಸುವ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಮಾತನಾಡಿದರು. 

ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಸೇರಿದಂತೆ ಇತರೆ ವಿವಿಧ ಇಲಾಖೆಯ ,ಆದಾಯ ಹೇಗೆ ಹೆಚ್ಚಿಸಬೇಕು ಎಂಬುದರ ಕುರಿತು ಮುಂದಾಲೋಚನೆ ಜೊತೆಗೆ ಎಲ್ಲಿ ಗ್ಯಾಪಗಳಿವೆ ಅವುಗಳನ್ನು ಹೇಗೆ ಸರಿಪಡಿಸಬೇಕು ಎಂಬುದರ ಕುರಿತು ಎಲ್ಲರೂ ನಿಖರವಾದ ಮಾಹಿತಿ ನೀಡಬೇಕು. ತಾವು ನೀಡುವ ಮಾಹಿತಿ ಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅಧಿಕಾರಿಗಳಿಗೆ ಹೇಳಿದರು. 

1999 ರಿಂದ ಈ ವರದಿಯನ್ನು ಕರ್ನಾಟಕದಲ್ಲಿ ಮಾಡಲು ಶುರು ಆಯಿತು. ಇದನ್ನು ಪುನ: ಆಗಾಗ ಮಾಡಲಾಗುತ್ತದೆ. 2015 ವರದಿಯನ್ನು 2025 ಹೋಲಿಕೆ ಮಾಡಲಾಗುತ್ತದೆ. ಶಿಕ್ಷಣ, ಆರೋಗ್ಯ, ಜನರ ಜೀವನ ಮಟ್ಟ ಇದರಿಂದ ತಿಳಿಯುತ್ತದೆ. 2022 ರ ವರದಿ ಪ್ರಕಾರ ಬಡತನ ಜಿಲ್ಲೆಗಳ ಪಟ್ಟಿ ತೆಗೆದುಕೊಂಡರೆ ಅದರಲ್ಲಿ ಕೊಪ್ಪಳ ಜಿಲ್ಲೆಯ  ಹೆಸರು ಬರುತ್ತದೆ. ನಮ್ಮ ವರದಿ ಜಿಲ್ಲೆಯ ಅಭಿವೃದ್ಧಿಗೆ ಪೂರವಾಗಿರುವುದರ ಜೊತೆಗೆ ನಿಖರವಾಗಿರಬೇಕು. ಈ ಹಿಂದೆ ಉಡುಪಿ ಮತ್ತು ವಿಜಯಪುರ ಜಿಲ್ಲೆಯ ವರದಿಗಳು ರಾಷ್ಟ್ರಮಟ್ಟದಲ್ಲಿ ಅಕ್ಸೆಪ್ಟ ಮಾಡಿದ್ದರು. ತಾವು ಸರಿಯಾದ ಪ್ಯಾರಾ ಮೀಟರ್ ಪ್ರಕಾರವೇ ಮಾಹಿತಿ ನೀಡಿ ಎಂದು ಹೇಳಿದರು. 

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ ಇಂದಿನ ತರಬೇತಿ ಕಾರ್ಯಾಗಾರದ ಉದ್ದೇಶ ಜಿಲ್ಲೆಯ ಮಾನವ ಅಭಿವೃದ್ಧಿ ಯೋಜನೆ ತಯಾರಿಸುವ ಕುರಿತು ಮಾಹಿತಿ ನೀಡುವುದಾಗಿದೆ. ಈ ಕುರಿತು ಸಂಪನ್ಮೂಲ ವ್ಯಕ್ತಿಗಳು ತಮಗೆ ವಿವರವಾದ ಮಾಹಿತಿ ನೀಡಲಿದ್ದಾರೆ. ಅಧಿಕಾರಿಗಳು ಯಾವುದೇ ಸುಳ್ಳು ಮಾಹಿತಿ ಕೊಡಭಾರದು. ಸರಿಯಾದ ಮಾಹಿತಿ ನೀಡುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕಾರ ನೀಡಬೇಕೆಂದರು. 

ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಿವೃತ್ತ ಜಂಟಿ ನಿರ್ದೆಶಕರಾದ ಶ್ರೀ ನಿವಾಸ, ಹಾವೇರಿ ವಿಶ್ವವಿದ್ಯಾಲಯ ಕುಲಸಚಿವರು ಹಾಗೂ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಪ್ರೋ. ಎಸ್‌.ಟಿ ಬಾಗಲಕೋಟಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ  ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೋ. ಹೆಚ್‌.ಹೆಚ್‌. ಭರಡಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ನರಗುಂದ ಪ್ರಾಧ್ಯಾಪಕರಾದ ಡಾ. ದುರ್ಗೇಶ ಪೂಜಾರ ಅವರು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ವರದಿಯನ್ನು ತಯಾರಿಸುವ ಕುರಿತು ಅಧಿಕಾರಿಗಳಿಗೆ ಸವಿವರವಾದ ಮಾಹಿತಿ ನೀಡಿದರು. 

ಈ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ ಯೋಜನಾಧಿಕಾರಿ ಡಿ.ಮಂಜುನಾಥ, ಜಿಲ್ಲಾ ನಗರಾಭಿವೃದ್ಧಿ ಕೋಶದ  ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ವೈ. ಶೆಟ್ಟೆಪ್ಪನವರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ ಜಾಬಗೌಡರ್, ಲೀಡಬ್ಯಾಂಕ್ ಮ್ಯಾನೇಜರ್ ಮಾರುತಿ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.