ಹಳೆಯ ನಾಣ್ಯಗಳು ಇತಿಹಾಸದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ: ಲಂಕೇಶ ಗಸ್ತಿ
Old coins stand as evidence of historical events: Lankesh Gasti
ಪಾಶ್ಚಾಪುರ 14 : ಹಳೆಯ ನಾಣ್ಯಗಳು ಇತಿಹಾಸದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ. ವಿದ್ಯಾರ್ಥಿಗಳು ಅವುಗಳ ಬಗ್ಗೆ ಕುತೂಹಲದಿಂದ ಅಂತಹ ನಾಣ್ಯಗಳ ಸಂಗ್ರಹಕ್ಕೆ ಆಸಕ್ತಿ ವಹಿಸಬೇಕು ಎಂದು ಹುಕ್ಕೇರಿ ತಾಲೂಕು ನರಸಿಂಗಪುರದ ಹವ್ಯಾಸಿ ನಾಣ್ಯ ಸಂಗ್ರಹಕಾರ ಲಂಕೇಶ ಗಸ್ತಿ ಹೇಳಿದರು.ಪಾಶ್ಚಾಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಏರಿ್ಡಸಿದ್ದ ಹಳೆಯ ನಾಣ್ಯಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ಆಧಾರವಿಲ್ಲದೆ ಇತಿಹಾಸವಿಲ್ಲ ಎಂಬುವುದು ಇತಿಹಾಸದ ಮೂಲ ಮಂತ್ರ. ಈ ಆಧಾರಗಳಲ್ಲಿ ನಾಣ್ಯಗಳು ಪ್ರಮುಖವಾಗಿವೆ. ನಾಣ್ಯಗಳ ಅಧ್ಯಯನವನ್ನು ನ್ಯೂಮಿಸ್ಮಾಟಿಕ್ಸ್ ಎಂದು ಕರೆಯಲಾಗಿದೆ. ನಾಣ್ಯಗಳು ಇತಿಹಾಸದಲ್ಲಿ ಹುದುಗಿ ಹೋದ ಅದೆಷ್ಟೋ ವಿಷಯಗಳನ್ನು ನಮಗೆ ತಿಳಿಸುತ್ತವೆ.
ಪುರಾತನ ನಾಣ್ಯಗಳು ಅನೇಕ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ. ಇತಿಹಾಸದ ವಿದ್ಯಾರ್ಥಿಗಳು ನಾಣ್ಯಗಳ ಬಗ್ಗೆ ತಿಳಿಯುವುದು ತುಂಬಾ ಮುಖ್ಯವಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶ್ರೀಧರ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಹಳೆಯ ನಾಣ್ಯ ಸಂಗ್ರಹಿಸಿ ಅವುಗಳ ಬಗ್ಗೆ ಅಮೂಲ್ಯ ಮಾಹಿತಿ ಪಡೆಯಬೇಕು ಎಂದು ತಿಳಿಸಿದರು.ಕಾಲೇಜಿನ ಐಕ್ಯೂಎಸಿ ವಿಭಾಗದ ಸಮನ್ವಯಾಧಿಕಾರಿ ಕಲ್ಪನಾ ಪೈನಗೋನಿ, ದೈಹಿಕ ಶಿಕ್ಷಣ ನಿರ್ದೇಶಕ ಎ.ಎ.ನದಾಫ್ ಉಪಸ್ಥಿತರಿದ್ದರು.
ಕಾರ್ತಿಕ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥೆ ಮಾನಸಾ ಪೂಜಾರಿ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಬಸರಗಿ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಮುಖ್ಯಸ್ಥ ಶಕೀಬ್ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 