ಏಪ್ರೀಲ್ 14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾಽಽ ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜನೆ

ಏಪ್ರೀಲ್ 14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾಽಽ ಬಿ.ಆರ್‌.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಯೋಜನೆ On 14th April, birth anniversary program of Constitution architect, Bharat Ratna Dr. BR Ambedkar.

ಲೋಕದರ್ಶನ ವರದಿ

ಧಾರವಾಡ  09: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್‌.ಅಂಬೇಡ್ಕರ್ ಅವರ 135 ನೇ ಜಯಂತಿ  ಕಾರ್ಯಕ್ರಮವನ್ನು ಏಪ್ರಿಲ್ 14, 2026 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಆಯೋಜಿಸಲಾಗಿದೆ.  ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು. 

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್‌. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‌ಪೀರ್‌.ಎಸ್‌.ಖಾದ್ರಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮತ ಅಧ್ಯಕ್ಷ ನಾಗೇಂದ್ರ ಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ, ಎನ್‌.ಎಚ್‌.ಕೋನರಡ್ಡಿ, ಎಸ್‌.ವ್ಹಿ. ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್‌.ಪಾಟೀಲ, ಎಫ್‌.ಹೆಚ್‌.ಜಕಪ್ಪನವರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಗಿರೆಪ್ಪಾ ಇಟಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ  ಮಹಾಪೌರರಾದ ಜ್ಯೋತಿ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌. ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ ಅವರು ಭಾಗವಹಿಸುವರು. 

ವಿಶೇಷ ಆಹ್ವಾನಿತರಾಗಿ ಬೆಂಗಳೂರು ಜಲಮಂಡಳಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ. ಎಂ ಅವರು ಭಾಗವಹಿಸುವರು. ಹುಬ್ಬಳ್ಳಿ ಜೆ.ಬಿ.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮಲ್ಲಮ್ಮ ಯಾಟಗಲ್ ಅವರು ಪ್ರಧಾನ ಭಾಷಣಾಕರಾಗಿ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್‌.ಘಾಳಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಜಗದೀಶ ಹೆಬ್ಬಳ್ಳಿ, ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಪಕ ಆರ್‌.ಹೆಚ್‌. ನಾಯ್ಕರ್ ಅವರು ಭಾಗವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

                                                                                    (ಡಾ. ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರ)