ಜ.17, 18 ರಂದು ಕರ್ನಾಟಕ ಉಪ ಲೋಕಾಯಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಅವರಿಂದ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ

On January 17 and 18, Karnataka Deputy Lokayukta Justice B. Veerpa received and heard complaints fr

ಜ.17, 18 ರಂದು ಕರ್ನಾಟಕ ಉಪ ಲೋಕಾಯಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಅವರಿಂದ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ  

ಬಳ್ಳಾರಿ 11: ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಅವರು ಜ.17 ಮತ್ತು 18 ರಂದು ಬಳ್ಳಾರಿ ನಗರದ ಡಾ.ಜೋಳದರಾಶಿ  ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು. ಜ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು.  

ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ, ನೌಕರರು ಯಾವುದೇ ತರಹದ ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು. ಜ.18 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಲ್ಲಿ (ಈ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಹಾಗಾಗಿ ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಸಿದ್ದರಾಜು.ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.