ಧೈರ್ಯ ಮತ್ತು ಸ್ತ್ರೀಶಕ್ತಿಯ ಪ್ರತೀಕ ವೀರವನಿತೆ ಒನಕೆ ಓಬವ್ವ
Onake Obavva, a heroic woman who embodies courage and female strength
ಧಾರವಾಡ ನ.11: ಧೈರ್ಯ, ದೇಶಭಕ್ತಿ ಮತ್ತು ಸ್ತ್ರೀಶಕ್ತಿಯ ಪ್ರತೀಕವಾದ ವೀರವನಿತೆ ಒನಕೆ ಓಬವ್ವ ಅವರ ತ್ಯಾಗ ಮತ್ತು ಸಾಹಸವನ್ನು ಪ್ರತಿಯೊಬ್ಬರೂ ನೆನಪಿಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಅವರು ಹೇಳಿದರು.
ಅವರು ಇಂದು (ನ.11) ಬೆಳಿಗ್ಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ವೀರವನಿತೆ ಒನಕೆ ಓಬವ್ವ ಜಯಂತಿಯ ಅಂಗವಾಗಿ ಒನಕೆ ಓಬವ್ವಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಒನಕೆ ಓಬವ್ವ ಅವರು ತಮ್ಮ ಬುದ್ದಿಶಕ್ತಿ ಮತ್ತು ಧೈರ್ಯದಿಂದ ತಮ್ಮ ಕಾಲದ ಆಕ್ರಮಣಕಾರರಿಗೆ ತಕ್ಕ ಪ್ರತಿರೋಧ ನೀಡಿದರು. ಅವರಂತಹ ಮಹಿಳೆಯರನ್ನು ನಾವು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಶಾಲೆ-ಕಾಲೇಜುಗಳಲ್ಲಿ ಅವರ ಜೀವನದ ಕುರಿತು ವಿಶೇಷ ಚರ್ಚೆಗಳನ್ನು ನಡೆಸಿದರೆ ಮಕ್ಕಳಿಗೂ ಅವರ ಬಗ್ಗೆ ಇನ್ನೂ ಹೆಚ್ಚಾಗಿ ತಿಳಿಯುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, ಒನಕೆ ಓಬವ್ವ ಅವರ ಸಾಹಸ ಕೇವಲ ಇತಿಹಾಸದ ಒಂದು ಘಟನೆ ಅಲ್ಲ, ಅದು ಮಹಿಳಾ ಶಕ್ತಿಯ ಶಾಶ್ವತ ಚಿಹ್ನೆ ಎಂದು ಹೇಳಿದರು. ಒನಕೆ ಓಬವ್ವ ಅವರು ನಮಗೆ ತೋರಿಸಿದ ಮಾರ್ಗ ದಿವ್ಯದೃಷ್ಠಿಯದ್ದಾಗಿದೆ. ನಾವೆಲ್ಲರೂ ಅವರ ಧೈರ್ಯ, ನಿಷ್ಠೆ ಮತ್ತು ದೇಶಭಕ್ತಿಯ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಹೇಳಿದರು.
ಪ್ರಗತಿಪರ ಚಿಂತಕ ಹಾಗೂ ಸಾಹಿತಿ ಡಾ. ಸದಾಶಿವ ಮರ್ಜಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು. ಸುಶೀಲಮ್ಮ ಚಲವಾದಿ ಅವರು ಕಾರ್ಯಕ್ರಮ ಉದ್ದೇಶಿಸಿ, ಮಾತನಾಡಿದರು.
ವೇದಿಕೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ್ ಸಿದ್ದನಗೌಡರ್, ಸಮಾಜದ ಮುಖಂಡರುಗಳಾದ ಆನಂದ ಮುಶನ್ನವರ, ಮೇಘರಾಜ ಗುಡಿಮನಿ, ಯಲ್ಲಪ್ಪ ಮಂಟೂರ, ದೇವಾನಂದ ರತ್ನಾಕರ, ಶಿವಪುತ್ರ್ಪ ಚಿಕ್ಕಪ್ಪ ಹಾಗೂ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆರತಿ ದೇವಶಿಖಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಜನಪ್ರತಿನಿಧಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 