ಒನಕೆ ಓಬವ್ವಳ ಸಮಯಪ್ರಜ್ಞೆ ಎಲ್ಲರಿಗೂ ಸ್ಪೂರ್ತಿ: ಡಿಸಿ ಸಿ.ಎನ್.ಶ್ರೀಧರ
Onake Obavwala's punctuality is an inspiration to everyone: DC C.N.Sreedhar
ಗದಗ 11: ವೀರವನಿತೆ ಒನಕೆ ಓಬವ್ವಳ ಸಮಯಪ್ರಜ್ಞೆ, ಬುದ್ಧಿವಂತಿಕೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಒನಕೆ ಓಬಬ್ವ ಚಿತ್ರದುರ್ಗದ ಪಾಳೇಗಾರನಾದ ಮುದ್ದು ಹನುಮಪ್ಪನ ಹೆಂಡತಿಯಾಗಿದ್ದಳು. ಊಟ ಮಾಡಲು ಬಂದಿದ್ದ ತನ್ನ ಗಂಡನಿಗೆ ನೀರು ತರಲು ಹೋದಾಗ ಓಬವ್ವಳಿಗೆ ಹೈದರಾಲಿಯ ಸೈನ್ಯವು ಚಿತ್ರದುರ್ಗದ ಮದಕರಿ ನಾಯಕರ ಕೋಟೆಯ ಕಿಂಡಿಯಿಂದ ಒಳನುಸುಳುತ್ತಿರುವುದು ಕಂಡು ಬಂದಿತು. ಅಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತನ್ನ ಜಾಣ್ಮೆಯಿಂದಲೇ ಹೈದರಾಲಿಯ ಸೈನಿಕರನ್ನು ಮನೆಯಲ್ಲಿರುವ ಒನಕೆಯಿಂದ ಹೊಡೆದು ಉಪಾಯದಿಂದಲೇ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿದಳು. ಕಷ್ಟ ಪರಿಸ್ಥಿತಿಯಲ್ಲಿ ನಮ್ಮಲ್ಲಿರುವ ಬುದ್ಧಿಯನ್ನು ವಿವೇಚನೆಯಿಂದ ಉಪಯೋಗಿಸಿಕೊಂಡು ಸಮರ್ಥವಾಗಿ ನಿಭಾಯಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ವೀರವನಿತೆ ಓಬವ್ವ ಅವರ ತ್ಯಾಗ, ಬುದ್ಧಿವಂತಿಕೆ ಹಾಗೂ ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿ ನುಡಿದರು. ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಮಾತನಾಡಿ ಒನಕೆ ಓಬವ್ವಳ ಶೂರತನ, ಸಮಯ ಪ್ರಜ್ಞೆಯಂತಹ ತತ್ವಗಳನ್ನು ಎಲ್ಲ ಮಹಿಳೆಯರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಹುಲಕೋಟಿಯ ಜಿ.ಸಿ.ಟಿ.ಎಂ. ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಡಾ.ಅರ್ಜುನ ಗೊಳಸಂಗಿ ಉಪನ್ಯಾಸ ನೀಡುತ್ತಾ ಒನಕೆ ಓಬವ್ವ ದಲಿತ ಸಮುದಾಯದ ವೀರವನಿತೆಯಾಗಿದ್ದಾಳೆ. ಛಲವಾದಿ ಸಮುದಾಯದ ಪಾಳೆ ಕಾಯಕದವರಾದ ಮುದ್ದುಹನುಮಪ್ಪನ ಹೆಂಡತಿಯೇ ಓಬವ್ವ. ಮುದ್ದುಹನುಮಪ್ಪನು ಸ್ವಾಮಿನಿಷ್ಟೆ, ಸ್ವಾಭಿಮಾನ ಹಾಗೂ ಕಾಯಕನಿಷ್ಟೆ ಹೊಂದಿದವನು. ಓಬವ್ವ ಯಾವುದೇ ರಣತಂತ್ರ , ತರಬೇತಿಯನ್ನಾಗಲಿ, ಯುದ್ಧವಿದ್ಯೆಯನ್ನು ಕಲಿತವಳಲ್ಲ. ಆದರೂ ಹೈದರಲಿಯ ಸೈನ್ಯವು ವೀರಮದಕರಿನಾಯಕರ ಕೋಟೆಯನ್ನು ಆಕ್ರಮಿಸಿಕೊಂಡಾಗ ಉಪಾಯದಿಂದ ಯಾವುದೇ ಶಸ್ತ್ರಾಸ್ತ್ರ ಬಳಸದೇ ಮನೆಯಲ್ಲಿನ ಒನಕೆಯಿಂದ ವೈರಿಗಳನ್ನು ಸದೆಬಡೆದು ಕೋಟೆ ರಕ್ಷಿಸಿದ ಹಿರಿಮೆ ಓಬವ್ವಳದ್ದು. ಒನಕೆ ಒಬವ್ವ ಮನುಕುಲದ ಸಾಂಸ್ಕೃತಿಕ ಲೋಕದ ದೃವತಾರೆಯಾದ ಇವಳು ಇತಿಹಾಸದಲ್ಲಿ ಧೀಮಂತ ಮಹಿಳೆಯಾಗಿದ್ದಾಳೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ ಹಾಗೂ ಎಸ್ ಎಸ್ ಎಲ್ ಸಿ, ಪಿಯುಸಿ, ಉನ್ನತ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಡಿವೈಎಸ್‌ಪಿ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಸನಗೌಡ್ರ ಕೋಟೂರ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್, ಬುರುಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಗಣ್ಯರು, ಹಿರಿಯರು ಹಾಜರಿದ್ದರು.
ವಿರುಪಾಕ್ಷಪ್ಪ ಗೂರನವರ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿ ವಂದಿಸಿದರು. ಆರ್.ಬಿ.ಚಿನಿವಾಲರ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮ ಪ್ರಾರಂಭವಾಗುವುದಕ್ಕೂ ಮುನ್ನ ವೀರವನಿತೆ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ವಿವಿಧ ಕಲಾತಂಡಗಳೊಂದಿಗೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಹೊರಟು ನಗರದ ಜಿಲ್ಲಾಡಳಿತ ಭವನಕ್ಕೆ ಬಂದು ತಲುಪಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 