ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ
One-day training workshop on illicit trafficking of women and children
ಧಾರವಾಡ ಜ.22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಿನ್ನೆ (ಜ.21) ಧಾರವಾಡ ಸಿವಿಲ್ ನ್ಯಾಯಾಲಯಗಳ ಆವರಣದ ಎಡಿಆರ್ ಕಟ್ಟಡದಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿವಿಧ ಭಾಗೀದಾರ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪ್ರವಾಸಿ ಮಿತ್ರರು, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ, ನ್ಯಾಯಾಂಗ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರತಾವಗಿರುವ ವಿವಿಧ ಸರ್ಕಾರೇತರ ಸಂಸ್ಥೆಗಳ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ. ಹೆಚ್. ಹೆಚ್. ಕುಕನೂರ ಅವರು ತರಬೇತಿ ಓಚಿತ್ಯದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ಬೆಂಗಳೂರಿನ ವಿಲಿಯಂ ಕ್ರಿಸ್ಟೋಫರ್ ಇಂಟರ್‌ನ್ಯಾಷನಲ್ ಜೆಸ್ಟೀಸ್ ಮಿಷನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನೀತಾ ಪಾಟೀಲ್ ಸ್ವಾಗತಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಹಮ್ಮದ ಅಲಿ ಅವರು ನಿರೂಪಿಸಿದರು. ಹಾಗೂ ಸತೀಶ್ ಭಟ್ ಅವರು ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 