ಜೀವನದಲ್ಲಿ ಆತ್ಮವಿಶ್ವಾಸದಿಂದ ಧೈರ್ಯವಾಗಿ ಬದುಕಬೇಕುಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ
One should live life with confidence and courage. District Surgeon Dr. P.R. Havanura
ಜೀವನದಲ್ಲಿ ಆತ್ಮವಿಶ್ವಾಸದಿಂದ ಧೈರ್ಯವಾಗಿ ಬದುಕಬೇಕುಜಿಲ್ಲಾ ಶಸ್ತ್ರ ಚಿಕಿತ್ಸ ಡಾ.ಪಿ.ಆರ್.ಹಾವನೂರ
ಹಾವೇರಿ 10 : ಜೀವನದಲ್ಲಿ ಧೈರ್ಯ ಕಳೆದುಕೊಳ್ಳಲು ಹಲವಾರು ಕಾರಣಗಳಿದ್ದು, ಅವೆಲ್ಲವನ್ನು ಮೆಟ್ಟಿನಿಂತು, ಆತ್ಮವಿಶ್ವಾಸದಿಂದ ಬದಕಲು ಕಲಿಯಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಪಿ ಆರ್ ಹಾವನೂರು ಹೇಳಿದರು.ನಗರದ ಶ್ರೀ ಶಿವಲಿಂಗೇಶ್ವರ ಮಹಿಳಾ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಆತ್ಮ ಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಕಷ್ಟ-ಸುಖ, ಸೋಲು-ಗೆಲವು ಸಾಮಾನ್ಯ. ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ, ಎಲ್ಲವನ್ನು ಸಮನಾಗಿ ಸ್ವೀಕರಿಸಿ ಮುನ್ನಡೆಯಬೇಕು. ಪ್ರತಿಯೊಬ್ಬರು ಆತ್ಮವಿಶ್ವಾಸದಿಂದ ಬದಕುಲು ಕಲಿಯಬೇಕು , ಆಗ ಮಾತ್ರ ಜೀವನದಲ್ಲಿ ನೆಮ್ಮದಿಯಿಂದಿರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪಾಲಕರು ಮತ್ತು ಮಕ್ಕಳ ನಡುವೆ ಉತ್ತಮ ಬಾಂಧವ್ಯ ಇರಬೇಕು. ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ. ಮಕ್ಕಳ ಕಲಿಕೆಗೆ ಹೆಚ್ಚು ಪ್ರೋತ್ಸಾಹ ನೀಡಿ, ಮಕ್ಕಳನ್ನು ಶಾಲೆಗಳಲ್ಲಿ ಪಡೆಯುವ ಅಂಕಗಳ ಆಧಾರದ ಮೇಲೆ ಅಳೆಯಬೇಡಿ ಮತ್ತು ಹೆಚ್ಚು ಅಕಗಳನ್ನು ಪಡೆಯುವಂತೆ ಒತ್ತಡ ಹೇರಿ ಮಕ್ಕಳ ಮನಸ್ಸಿನಲ್ಲಿ ಆತಂಕ ಮೂಡಿಸಬೇಡಿ. ಅವರುಗಳಿಗೆ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದರು.
ತಮ್ಮ ನೋವುಗಳನ್ನು ಹತ್ತಿರದ ವ್ಯಕ್ತಿಗಳಲ್ಲಿ ಹಂಚಿಕೊಂಡು ಮನಸ್ಸು ಹಗುರಮಾಡಿಕೊಳ್ಳಬೇಕು. ಕಷ್ಟಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಮಾನಸಿಕವಾಗಿ ಕೊರಗಬಾರದು. ನಮ್ಮ ಸುತ್ತಮುತ್ತ ಯಾರಾದರೂ ಮಾನಸಿಕವಾಗಿ ಬಳಲುತ್ತಿದ್ದರೆ, ಅವರನ್ನು ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿ ಮಾನವೀಯತೆ ಮೆರೆಯುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವೈದ್ಯರಾದ ಡಾ.ಶೃತಿ ಎ. ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಅವರು ಆತ್ಮ ಹತ್ಯೆಯ ತಡೆಗಟ್ಟುವ ಕುರಿತು ವಿಶೇಷ ಉಪನ್ಯಾಸ ನೀಡಿದರು.ಇದೇ ಸಂದರ್ಭದಲ್ಲಿ ಆತ್ಮಹತ್ಯೆ ತಡೆಗಟ್ಟುವ ಕುರಿತು ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಧಿಕಾರಿ ಡಾ. ಸರಿತಾ, ತಾಲೂಕ ಆರೋಗ್ಯಧಿಕಾರಿ ಡಾ. ಪ್ರಭಾಕರ್ ಕುಂದೂರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ್ ಕರಮುಡಿ, ಪ್ರಾಚಾರ್ಯರಾದ ರವಿ ಸಿ ವಿ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 