ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಆಸಕ್ತಿ ತೋರಬೇಕು: ರಾಜೇಶ್ವರಿ

ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಆಸಕ್ತಿ ತೋರಬೇಕು: ರಾಜೇಶ್ವರಿ  One should show interest in arts along with education: Rajeshwari

ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಆಸಕ್ತಿ ತೋರಬೇಕು: ರಾಜೇಶ್ವರಿ  

ಬಳ್ಳಾರಿ 02: ಜಾನಪದ ಸಂಗೀತ ಕಾರ್ಯಕ್ರಮಗಳು ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಮಾಜಕಲ್ಯಾಣಇಲಾಖೆಯ ಸಹಾಯಕ ನಿರ್ದೇಶಕರಾದರಾಜೇಶ್ವರಿ.ಬಿ ಅವರು ಹೇಳಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದಕೋಟೆಯಡಾ.ಬಿ.ಆರ್‌.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಶುಕ್ರವಾರಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ “ಜಾನಪದ ಸಂಗೀತ” ಕಲಿಕಾ ತರಬೇತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ನಮ್ಮಜೀವನಾಡಿಯಂತಿರುವ ದೇಶಿಯ ಕಲೆ ಉಳುವಿಗೆ  ಹಾಗೂ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಮೂಲ ಜಾನಪದ ಸಂಗೀತಇತ್ತೀಚೆಗೆ ನೇಪಥ್ಯಕ್ಕೆ ಸರಿಯುತ್ತಿರುವುದು ಕಳವಳಕಾರಿಯಾಗಿದೆ. ಕನ್ನಡ ಮತ್ತು ಸಂಸ್ಕೃತಿಇಲಾಖೆಯುಇಂತಹತರಬೇತಿ ಕಾರ್ಯಕ್ರಮಗಳನ್ನು ನೀಡಿ ಪ್ರೋತ್ಸಾಹಿಸುತ್ತದೆ.ವಿದ್ಯಾರ್ಥಿಗಳು ವಿದ್ಯಾಭ್ಯಾಸದಜೊತೆಗೆ ಕಲೆಗಳಲ್ಲಿ ಭಾಗವಹಿಸಿ ನಿಮ್ಮನ್ನು ನೀವು ಗುರುತಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ನಶಿಸಿಹೋಗುತ್ತಿರುವ ಕಲೆಗಳನ್ನು ಮರುಕಳಿಸಲು ಈ ಕಲಿಕಾ ತರಬೇತಿಯನ್ನುಆಯೋಜಿಸಲಾಗಿದೆ .ಈ ತರಬೇತಿಯು 6 ತಿಂಗಳು ಕಾಲ ನಡೆಯಲಿದ್ದು, ವಾರಕ್ಕೆ ಮೂರು ದಿನದಂತೆ 2 ಗಂಟೆಗಳ ಅವಧಿತರಬೇತಿ ನೀಡಲಾಗುತ್ತದೆ. ಆಸಕ್ತಿ ಹೊಂದಿದ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ತಮ್ಮಲ್ಲಿರುವಕಲೆಯನ್ನು ಪ್ರದರ್ಶಿಸಬಹುದುಎಂದುಕರೆ ನೀಡಿದರು.ಚಿಗುರು ಕಲಾ ತಂಡದಜಾನಪದಗಾಯಕ ಹಾಗೂ ತರಬೇತುದಾರ ಎಸ್‌.ಎಂ.ಹುಲುಗಪ್ಪಅವರು ಮಾತನಾಡಿ, ಶಿಕ್ಷಣದಲ್ಲಿ ಸಂಗೀತ ಕಲಿಸಿದಂತೆ, ಜಾನಪದಕಲೆಯನ್ನುಒಂದು ವಿಷಯವನ್ನಾಗಿ ಪ್ರಾಥಮಿಕ ಹಂತದಿಂದಲೇ ಬೋಧನೆ ಮಾಡಬೇಕು.  ಮರೆಯಾಗುತ್ತಿರುವಜಾನಪದ ಕಲೆ ಮುಂದಿನ ಪೀಳಿಗೆಯವರಿಗೆ ಪರಿಚಯವಾಗಲಿದೆ.ಜಾನಪದ ಸಂಗೀತದ ಮೂಲಕ  ಜಾನಪದಕಲೆಗಳನ್ನು ಉತ್ತುಂಗಕ್ಕೆತೆಗೆದುಕೊಂಡು ಹೋಗಲು ವಿದ್ಯಾವಂತರ ಪಾತ್ರಅಮೋಘವಾಗಿದೆಎಂದರು. 

ಬಳಿಕ ಚಿಗುರು ಕಲಾ ತಂಡದಿಂದ ವಿದ್ಯಾರ್ಥಿನಿಯರಿಗೆ “ಜಾನಪದ ಸಂಗೀತ” ಕಲಿಕಾ ತರಬೇತಿ ನಡೆಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ ಉಷಾ ಕುಮಾರಿ, ನಿಲಯ ಪಾಲಕರಾದ ಸ್ವಪ್ನ ಸೇರಿದಂತೆಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.