ಒನ್ ಸೈಡ್ ಪಾಕಿಂರ್ಗ್ ವ್ಯವಸ್ಥೆ ಜಾರಿಗೊಳಿಸಿದೆ

One-side parking system implemented

ಒನ್ ಸೈಡ್ ಪಾಕಿಂರ್ಗ್ ವ್ಯವಸ್ಥೆ ಜಾರಿಗೊಳಿಸಿದೆ 

ಶಿರಹಟ್ಟಿ 05 : ಪಟ್ಟಣದ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ಸುಗಮವಾಗಿಸಲು ಮತ್ತು ಸಾರ್ವಜನಿಕರಿಗೆ ಮುಕ್ತ ಸಂಚಾರ ಅವಕಾಶ ಕಲ್ಪಿಸಲು ಶಿರಹಟ್ಟಿ ಪಿಎ??? ಚೆನ್ನಯ್ಯ ದೇವೂರ ಅವರ ನೇತೃತ್ವದಲ್ಲಿ ಒನ್ ಸೈಡ್ ಪಾಕಿಂರ್ಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಈ ನಿಯಮಕ್ಕೆ ಸಹಕರಿಸಬೇಕೆಂದು ಅವರು ವಿನಂತಿಸಿದರು.ಗುರುವಾರ ನಡೆದ ಕಾರ್ಯಾಚರಣೆಯಲ್ಲಿ, ದ್ವಿಚಕ್ರ ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸಬೇಕೆಂಬ ಬಗ್ಗೆ ವಿಶೇಷವಾಗಿ ಜಾಗೃತಿ ಮೂಡಿಸಲಾಯಿತು. ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ ವಾಹನ ಸವಾರರನ್ನು ತಡೆಹಿಡಿದು, ಹೆಲ್ಮೆಟ್‌ನ ಲಾಭಗಳನ್ನು ವಿವರಿಸಿ, ಸುರಕ್ಷತೆ ಕುರಿತು ಅರಿವು ಮೂಡಿಸಲಾಯಿತು.ನೆಹರು ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಪ್ರತಿದಿನ ನೂರಾರು ಬೈಕ್ ಸವಾರರು ಸಂಚರಿಸುತ್ತಿದ್ದು, ಮಾರುಕಟ್ಟೆ ಪ್ರದೇಶದಲ್ಲಿ ಸಂಚಾರ ಅಡಚಣೆಯಾಗುತ್ತಿತ್ತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಒಂದೊಂದು ಬದಿಯಲ್ಲಿ ವಾಹನ ಪಾಕಿಂರ್ಗ್ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜನಸಂದಣಿ ಹೆಚ್ಚಿರುವ ಇತರ ಪ್ರದೇಶಗಳಲ್ಲೂ ಸೂಕ್ತ ಪಾಕಿಂರ್ಗ್ ವ್ಯವಸ್ಥೆ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಸಹಕಾರ ನೀಡಬೇಕೆಂದು ಅಧಿಕಾರಿಗಳು ಮನವಿ ಮಾಡಿದರು.