ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಆನ್‌ಲೈನ್ ಕಲಿಕೆ ಅಗತ್ಯ
Online learning is essential for students' knowledge development
ಲೋಕದರ್ಶನ ವರದಿ
ಬಳ್ಳಾರಿ 12 : ಉನ್ನತ ಶಿಕ್ಷಣದ ಆಶಯಗಳನ್ನು ಸಾಕಾರಗೊಳಿಸಲು ಭಾರತ ಸರ್ಕಾರವು ಸ್ವಯಂ, ಮೂಕ್ಸ್ ಮಾದರಿಯ ಆನ್‌ಲೈನ್ ಕಲಿಕಾ ಕೋರ್ಸ್‌ಗಳನ್ನು ಪರಿಚಯಿಸಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನಾಭಿವೃದ್ಧಿಗೆ ಆನ್‌ಲೈನ್ ಕಲಿಕಾ ಪ್ರಕ್ರಿಯೆಗೆ ಹೊಂದಿಕೊಳ್ಳಬೇಕು ಎಂದು ನವದೆಹಲಿಯ ನ್ಯಾಕ್ ಸಮಿತಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪ್ರೊ.ನಾಗೇಶ್ವರ ರಾವ್ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ಸಭಾಂಗಣದಲ್ಲಿ ಶುಕ್ರವಾರದಿಂದ ಆರಂಭವಾಗಿರುವ ವಾಣಿಜ್ಯ ಹಾಗೂ ನಿರ್ವಹಣಾಶಾಸ್ತ್ರ ಅಧ್ಯಾಪಕರ ರಾಜ್ಯ ಸಂಘ ಹಾಗೂ ವಿಶ್ರೀಕೃವಿವಿ ಸಹಭಾಗಿತ್ವದಲ್ಲಿ ಆಯೋಜಿಸಿರುವ ಎರಡು ದಿನಗಳ ‘ತಂತ್ರಜ್ಞಾನ ಆಧಾರಿತ ವ್ಯವಹಾರ ಪದ್ಧತಿಗಳು ಮತ್ತು ಕಾರ್ಯತಂತ್ರದ ಜಾಗತಿಕ ಸಮಾಗಮ’ ಎಂಬ ವಿಚಾರ ಸಂಕಿರಣ ಗಣ್ಯರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಕ್ ಸಮಿತಿಯು ಶಿಕ್ಷಣ ಸಂಸ್ಥೆಗಳಲ್ಲಿನ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡುತ್ತದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಸಂಸ್ಥೆಗಳಿಗೆ ಅರ್ಹತೆಗೆ ಅನುಗುಣವಾಗಿ ಗ್ರೇಡ್‌ಗಳನ್ನು ನೀಡುತ್ತದೆ. ನ್ಯಾಕ್ ಮಾನ್ಯತೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಮೌಲ್ಯಮಾಪನ ವ್ಯವಸ್ಥೆಗಳಿದ್ದು, ಆಯಾ ಮಾನದಂಡಗಳಿಗೆ ಅನುಸಾರವಾಗಿ ಗ್ರೇಡಿಂಗ್‌ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣವು ಸದೃಢವಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್ ಕೋರ್ಸ್‌ಗಳಿಗೆ ನೋಂದಣಿ ಮಾಡಿಕೊಂಡು ವರ್ಷಕ್ಕೆ ಒಂದಾದರೂ ಕೋರ್ಸ್ ಪೂರ್ಣಗೊಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 