ಚಿಕ್ಕೋಡಿ: ಹನುಮಾನ್ ಮಂದಿರ ಉದ್ಘಾಟನೆ
ಲೋಕದರ್ಶನ ವರದಿ
ಚಿಕ್ಕೋಡಿ 06: ತಾಲೂಕಿನ ನೇಜ ಗ್ರಾಮದಲ್ಲಿ ಸುಮಾರು 22 ಲಕ್ಷ ರೂ. ವೆಚ್ಚದಲ್ಲಿ ನಿಮರ್ಾಣವಾದ ಹನುಮಾನ್ ಮಂದಿರವನ್ನು ಶಾಸಕ ಗಣೇಶ ಹುಕ್ಕೇರಿ ಗುರುವಾರ ಭಕ್ತರಿಗೆ ಅಪರ್ಿಸಿದರು. ಸಂಕೇಶ್ವರದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಮಠದ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿ ಸ್ವಾಮಿಗಳ ಸಾನಿಧ್ಯದಲ್ಲಿ ಹನುಮಾನ್ ದೇವಸ್ಥಾನದ ವಾಸ್ತುಶಾಂತಿ, ಮೂತರ್ಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮಗಳು ನಡೆದವು.
ಮಾಜಿ ಸಚಿವರೂ ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಅವರ ಪ್ರಯತ್ನದಿಂದ ನೇಜ ಗ್ರಾಮದ ಜನರ ಬಹು ಅಪೇಕ್ಷೆಯಂತೆ ಹನುಮಾನ್ ಮಂದಿರವನ್ನು ನಿಮರ್ಾಣ ಮಾಡಲಾಗಿದೆ.ದೇವಸ್ಥಾನಗಳ ನಿಮರ್ಾಣದಿಂದ ಗ್ರಾಮದ ಚಿತ್ರಣವೇ ಬದಲಾಗಲಿದೆ. ಜನರಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ. ಜನರೆಲ್ಲ ಒಗ್ಗಟ್ಟಿನಿಂದ ದೇವರ ಸೇವೆ ಮಾಡುತ್ತ, ಗ್ರಾಮದ ಸವರ್ಾಂಗೀಣ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಗಣೇಶ ಹುಕ್ಕೇರಿ ಕರೆ ನೀಡಿದರು.
ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ಶಾಸಕಹನುಮಾನ್ ಮಂದಿರ ಉದ್ಘಾಟನೆಯ ನಂತರ ಮಹಾಪ್ರಸಾದ ವಿತರಣೆ ನಡೆಯಿತು. ಶಾಸಕ ಗಣೇಶ ಹುಕ್ಕೇರಿ ಎಲ್ಲ ಭಕ್ತರೊಂದಿಗೆ ನೆಲದ ಮೇಲೆಯೇ ಕುಳಿತು ಸಾಮಾನ್ಯ ಜನರಂತೆ ಪ್ರಸಾದ ಸೇವಿಸಿದರು. ದೇವರ ಸನ್ನಿಧಿಯಲ್ಲಿ ಎಲ್ಲರೂ ಒಂದೇ ಎನ್ನುವ ಭಾವನೆ ಮೂಡಿಸಿದ ಶಾಸಕರು, ಗ್ರಾಮಸ್ಥರೊಂದಿಗೆ ಸ್ಥಳೀಯ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 