ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ
Opportunity to adopt stray dogs
ಜಮಖಂಡಿ 20: ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳನ್ನು ಆಶ್ರಯ ತಾಣಗಳಲ್ಲಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಆಸಕ್ತ ಸಾರ್ವಜನಿಕರು ಎನ್ಜಿಒಗಳು ಹಾಗೂ ಶ್ವಾನಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಹಾಗೂ ಆಸ್ಪತ್ರೆ, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳಲ್ಲಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಆಸಕ್ತ ಸಾರ್ವಜನಿಕರು ಶ್ವಾನ ಪ್ರಿಯರು ಬೀದಿ ನಾಯಿಗಳನ್ನು ದತ್ತು ಪಡೆಯಲಿಚ್ಛಿಸಿದರೆ ಜಮಖಂಡಿ ನಗರಸಭೆಗೆ ಸಂಪರ್ಕಿಸುವಂತೆ ಪೌರಾಯುಕ್ತ ಜ್ಯೋತಿ ಗೀರೀಶ ಎಸ್, ಪ್ರಕಟಣೆಗೆ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 