ಸಾಮರ್ಥ್ಯ ಅಭಿವೃದ್ಧಿ ತರಬೇತಿ ಆಯೋಜಿಸಿ : ಡಾ.ತಿಪ್ಪೇಸ್ವಾಮಿ ಕೆ.ಟಿ
Organize capacity development training: Dr. Thippeswamy KT
ಕಾರವಾರ 28: ಬಾಲ ಕಾರ್ಮಿಕ ಪದ್ದತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಕಲಂ 17 ರಡಿಯಲ್ಲಿ ನೇಮಕವಾದ ವಿವಿಧ ಇಲಾಖೆಗಳ ನೀರೀಕ್ಷಕರಿಗೆ ತಮ್ಮ ಕೆಲಸದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಆಯೋಜಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ನಿರ್ದೇಶನ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಕ್ಕಳ ಮತ್ತು ಹದಿಯರೆದವರ ಕಾರ್ಮಿಕ ಪದ್ದತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ದತಿ ನಿಷೇಧ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ಆಯಾ ತ್ರೈಮಾಸಿಕ ನಡೆಯಬೇಕಾದ ತ್ರೈಮಾಸಿಕ ಸಭೆಯನ್ನು ಕಡ್ಡಾಯವಾಗಿ ಪ್ರತಿ ತಾಲೂಕಿನಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ನಿಗಧಿತ ಅವಧಿಯೊಳಗೆ ನಡೆಯಬೇಕು ಎಂದ ಅವರು, ಜಿಲ್ಲೆಯಲ್ಲಿನ ಕೈಗಾರಿಕೆ, ಹೋಟೆಲ್, ಗ್ಯಾರಜ್, ಕ್ವಾರಿಗಳಿಗೆ ದಿಢೀರ್ ದಾಳಿ ಮಾಡಿ ತಪಾಸಣೆ ಮಾಡಬೇಕು, ತಪಾಸಣೆ ಅವಧಿಯಲ್ಲಿ ಬಾಲಕಾರ್ಮಿಕರು ಕಂಡು ಬಂದಲ್ಲಿ, ಪಂಚಾಯತಿ ಅಥವಾ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿಗೆ ಮಾಹಿತಿ ಮುಂದೆ ಕಡ್ಡಾಯವಾಗಿ ಹಾಜರು ಪಡಿಸಬೇಕು ಹಾಗೂ ಆ ವ್ಯಾಪ್ತಿಯ ಶಾಲೆಯ ಮುಖ್ಯ ಶಿಕ್ಷಕರಿಂದ ಹಾಜರಾತಿ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೋಂ ಕೇರ್ ಏಜೆನ್ಸಿಯವರು 18 ವರ್ಷದೊಳಗಿನ ಹೆಣ್ಣುಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ಬಗ್ಗೆ ಆಯೋಗಕ್ಕೆ ದೂರುಗಳು ಸಲ್ಲಿಕೆಯಾಗುತ್ತಿದ್ದು, ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳುವಂತೆ ಹಾಗೂ ಅಂತಹವರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆ ಬಿಟ್ಟ ಮಕ್ಕಳ ವಿವರಗಳನ್ನು ಕಾರ್ಮಿಕ ಇಲಾಖೆಗೆ ವಿನಿಮಯ ಮಾಡುವುದರ ಮೂಲಕ ಮಕ್ಕಳ ರಕ್ಷಣೆಯ ಜೊತೆ ಅವರ ಶಿಕ್ಷಣಕ್ಕೂ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತಾಗಬೇಕು ಎಂದ ಅವರು , ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗ:ಳ ಕುರಿತು ಶಾಲೆಗಳಲ್ಲಿ ಮಾಹಿತಿ ನೀಡುವುದರ ಮೂಲಕ ಕಾರ್ಮಿಕ ಮಕ್ಕಳಿಗೆ ಸೌಲಭ್ಯ ಪಡೆಯಲು ಉತ್ತೇಜನೆ ನೀಡುವಂತಾಗಬೇಕು ಎಂದರು.
18 ವರ್ಷದೊಳಗಿನ ಮಕ್ಕಳಿಗೆ, ಅಂಗನವಾಡಿ ಮತ್ತು ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳ ಸಿಎಸ್‌ಆರ್ ನಿಧಿಯಿಂದ ಬಳಸಲಾದ ಮತ್ತು ಸಿಎಸ್‌ಆರ್ ನಿಧಿ ಎಷ್ಟು ಸಂಗ್ರಹವಾಗಿದೆ ಎಂಬುದರ ಕುರಿತು ವರ್ಷವಾರು ಮಾಹಿತಿ ಒಳಗೊಂಡ ವರದಿಯನ್ನು ನೀಡುವಂತೆ ಕೈಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 