ನಮ್ಮ ಸಂವಿಧಾನವೇ ನಮ್ಮ ನೆಮ್ಮದಿಯ ಬದುಕಿಗೆ ಸ್ಪೂರ್ತಿ ದಾಯಕ ವಾಗಿದೆ--ಪಟೇಲ
Our Constitution is the inspiration for our peaceful life - Patel
ಕೊಪ್ಪಳ 27: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ,ಆರ್ ಅಂಬೇಡ್ಕರ್ ಅವರು ಬರೆದು ಭಾರತದ ಪ್ರಜೆಗಳಿಗೆ ಸಮರ್ಿಸಿದ ನಮ್ಮ ಸಂವಿಧಾನವೇ ಪ್ರತಿಯೊಬ್ಬರ ನೆಮ್ಮದಿಯ ಬದುಕಿಗೆ ಸ್ಪೂರ್ತಿ ದಾಯಕ ವಾಗಿದೆ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಹಿರಿಯ ಮುಖಂಡ ಅಮ್ಜದ್ ಪಟೇಲ್ ಹೇಳಿದರು,ಅವರು ಸೋಮವಾರ ಬೆಳಿಗ್ಗೆ ನಗರದ ಆಟೋ ಚಾಲಕರ ಮತ್ತು ಮಾಲಕರ ಸಂಘದ ಕಚೇರಿಯಲ್ಲಿ ಏರಿ್ಡಸಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಏರಿ್ಡಸಿದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಡಾ, ಬಿ ಆರ್ ಅಂಬೇಡ್ಕರ್, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಹಾನ್ ನಾಯಕ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಿ ಏರಿ್ಡಸಿದ ಸರಳ ಸಾಂಕೇತಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು,
ಮುಂದುವರಿದು ಮಾತನಾಡಿ ನಾವುಗಳು ಸಂವಿಧಾನಿಕ ಮೌಲ್ಯಗಳನ್ನು ಪಾಲಿಸುತ್ತಾ ಮಹಾತ್ಮ ಗಾಂಧೀಜಿ ಯವರ ಕನಸಿನ ಭಾರತ ನಿರ್ಮಾಣವಾಗಲು ಶ್ರಮಿಸಬೇಕು, ಸಿಕ್ಕಿರುವ ಅಧಿಕಾರವನ್ನು ಜನಸೇವೆ ಯನ್ನಾಗಿಸಿ ಪ್ರಜೆಗಳ ಸ್ವಾಭಿಮಾನಿಗಳ ಬದುಕಿಗೆ ನಮ್ಮ ಅಧಿಕಾರ ಆಸರೆ ಯಾಗ ಬೇಕು, ಈ ದಿಶೆಯಲ್ಲಿ ನಮ್ಮ ನಾಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರಕಾರ ಪ್ರಜೆಗಳ ಕಲ್ಯಾಣಕ್ಕಾಗಿ ಕಂಕಣ ಬದ್ಧವಾಗಿ ಶ್ರಮಿಸುತ್ತಿದೆ ಎಂದರು, ನ್ಯಾಯ ಸಮಾನತೆ ಮತ್ತು ಘನತೆಯ ಬುನಾದಿಯ ಮೇಲೆ ನಿಂತಿರುವ ನಮ್ಮ ಸಂವಿಧಾನ ದ ಮೇಲಿನ ನಂಬಿಕೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಗಣರಾಜ್ಯೋತ್ಸವದ ದಿನವಾದ ಇಂದು ನಾವು ಪ್ರತಿಜ್ಞೆ ಮಾಡೋಣ ಗಾಂಧೀಜಿಯವರ ಕನಸು ನನಸು ಮಾಡೋಣ ಅವರ ಕನಸಿನ ಭಾರತ ನಿರ್ಮಾಣಕ್ಕೆ ಫಣ ತೊಟ್ಟು ಶ್ರಮಿಸೋಣ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡ ಅಮ್ಜದ್ ಪಟೇಲ್ ಅಭಿಪ್ರಾಯ ಪಟ್ಟರು, ಇದೆ ವೇಳೆ ಸಂಘದ ಪರವಾಗಿ ಅಂಗನವಾಡಿ ಶಾಲಾ ಮಕ್ಕಳಿಗೆ ಪೆನ್ನು ಪೆನ್ಸಿಲ್ ನೋಟ್ ಬುಕ್ ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳು ಸದಸ್ಯರು ವಿವಿಧ ಸಂಘಟನೆಗಳ ಮುಖ್ಯಸ್ಥರು ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 