ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ-ತಂಬ್ರಳ್ಳಿ
Our country's constitution is a model for the whole world - Tambralli
ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ-ತಂಬ್ರಳ್ಳಿ
ಕೊಪ್ಪಳ 26 : ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ರವರು ರಚಿಸಿದ ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಹೇಳಿದರು,ಅವರು ರವಿವಾರ ಬೆಳಿಗ್ಗೆ ನಗರದ ಜಿಪಿಎಚ್‌ಎಸ್ ಶಾಲೆಯಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು, ಮುಂದುವರಿದು ಮಾತನಾಡಿ ಸರ್ವರಿಗೂ ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದಲ್ಲಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ್ದಾರೆ, ದೇಶದ ಏಕತೆ ರಾಷ್ಟ್ರೀಯ ಭಾವೈಕ್ಯತೆ ಉಳಿಸಿ ಬೆಳೆಸಿಕೊಂಡು ಸಹೋದರತ್ವ ಭಾವನೆಯನ್ನು ಪ್ರತಿಯೊಬ್ಬರಲ್ಲಿ ಮೂಡಿಸಬೇಕು ನಾವೆಲ್ಲರೂ ಭಾರತೀಯರು ನಮ್ಮ ದೇಶ ನಮ್ಮ ದೇಶದ ಸಂವಿಧಾನದ ಬಗ್ಗೆ ನಮ್ಮೆಲ್ಲರಿಗೆ ಅಭಿಮಾನ ಇದೆ ಅದನ್ನೇ ಮುಂದಿನ ಯುವ ಪೀಳಿಗೆಗೆ ಪರಿಚಯಿಸುವಂಥ ಕೆಲಸ ನಾವು ನೀವು ಸೇರಿ ಮಾಡಬೇಕಾಗಿದೆ ಸಂವಿಧಾನದ ಆಶಯದಂತೆ ನಾವೆಲ್ಲರೂ ಜೀವನ ಸಾಗಿಸಿ ನಮ್ಮ ನಮ್ಮ ಬದುಕು ಸಾರ್ಥಕ ಮಾಡಿಕೊಳ್ಳಬೇಕು. ಎಂದು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಕ್ಲಬ್ಬಿನ ಪದಾಧಿಕಾರಿಗಳಾದ ಕಾರ್ಯದರ್ಶಿ ಮೀನಾಕ್ಷಿ ಬಣ್ಣದ ಬಾವಿ, ಎಡಿಟರ್ ನಾಗವೇಣಿ ಗರುರ್ ,ಐ ಎಸ್ ಓ ಮಧು ನಿಲೋಗಲ್, ಮಾಜಿ ಅಧ್ಯಕ್ಷರಾದ ಶರಣಮ್ಮ ಪಾಟೀಲ್ ಮತ್ತು ಸುಜಾತಾ ಪಟ್ಟಣಶೆಟ್ಟಿ ಸೇರಿದಂತೆ ಕ್ಲಬ್ಬಿನ ಸದಸ್ಯರಾದ ಹೇಮಾ ಮತ್ತು ಜ್ಯೋತಿ ಉಪಸ್ಥಿತರಿದ್ದರು, ಅಲ್ಲದೆ ಶಾಲೆಯ ಮುಖ್ಯ ಶಿಕ್ಷಕರಾದ ನಟರಾಜ್ ಅವರೇ 76ನೆಯ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು ಇದೇ ವೇಳೆ ವಿದ್ಯಾರ್ಥಿಗಳು ಇತರ ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 