ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಗುರಿ : ಎಸ್. ಬಾಬು
Our goal is to respond to public issues: S. Babu
ಬಳ್ಳಾರಿ 08: ದೇಶದಲ್ಲಿ 1500ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಟನೆಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಸಂಘಟನೆಯಾಗಿದೆ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಎಸ್. ಬಾಬು ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘಟನೆ ಭಾರತ ಸರ್ಕಾರದ ಗ್ರಾಹಕರ ವ್ಯವಹಾರಗಳ ಸಚಿವಾಲಯದಲ್ಲಿ ನೊಂದಾಯಿತವಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಬೃಹತ್ ಸಂಘಟನೆಯಾಗಿದೆ ಎಂದು ತಿಳಿಸಿದರು.
ಸಂಘಟನೆಯ ಮೂಲ ಉದ್ದೇಶ ಸಮಾಜದ ಬಲಹೀನ ವರ್ಗಗಳು ಹಾಗೂ ಅನ್ಯಾಯಕ್ಕೊಳಗಾದ ವ್ಯಕ್ತಿಗಳಿಗೆ ನ್ಯಾಯ ಒದಗಿಸುವುದಾಗಿದೆ. ಸಾರ್ವಜನಿಕರಿಗೆ ಆಗುವ ಅನ್ಯಾಯ, ಸಮಸ್ಯೆಗಳ ಬಗ್ಗೆ ಸ್ಪಂದಿಸಿ ಅವರ ಹಕ್ಕುಗಳನ್ನು ಕಾಪಾಡುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.ವೇದಿಕೆಯ ಹೆಸರನ್ನು ಯಾವುದೇ ಸದಸ್ಯರು ದುರುಪಯೋಗ ಮಾಡಿಕೊಂಡರೆ, ಸಂಬಂಧಪಟ್ಟವರು ದೂರು ನೀಡಿದ ಕೂಡಲೇ ಪರೀಶೀಲಿಸಿ, ತಪ್ಪಿತಸ್ಥ ಸದಸ್ಯರನ್ನು ಸಂಘಟನೆಯಿಂದ ತಕ್ಷಣವೇ ವಜಾಗೊಳಿಸಲಾಗುವುದು ಎಂದು ಎಚ್ಚರಿಸಿದರು.ಈ ಪತ್ರಿಕಾಗೋಷ್ಠಿಯಲ್ಲಿ ವಲಿಪಿರ್ ಭಾಷ್, ನಾಗಪ್ಪ ಅಮೀನಾ, ಸುಜಾತ, ಪದ್ಮಾವತಿ, ಹುಲಿಗೆಮ್ಮ, ನವೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 