ಸತ್ವ, ತತ್ವ ಆಧಾರಿತ ಆಡಳಿತ ನಮ್ಮದು, ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಹೊರೆಯಲ್ಲ : ಎಚ್ ಕೆ ಪಾಟೀಲ
Ours is a principle-based administration, not a guarantee burden for the state government: HK Patil
ಗದಗ 27: ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೇ ಪ್ರಭುಗಳಾಗಿದ್ದು ಅವರ ಸೇವೆಗೆ ಅವಕಾಶ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಚೇರಿಗಳಿಗೆ ಬರುವ ಸಾರ್ವಜನಿಕರು ಗ್ರಾಹಕರಲ್ಲ. ಅವರು ಪ್ರಭುಗಳಾಗಿದ್ದಾರೆ. ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಇಲಾಖೆಯ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕೆಂದರು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಿಂದ ಎಲ್ಲ ಕಡೆಗೆ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಚಿವ ಸಂಪುಟದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ವಿಶೇಷ ಮಹತ್ವವಿದೆ. ಯಾವ ಕಚೇರಿಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸ್ಪಂದನೆ ಪಡೆದಿರುವುದಿಲ್ಲವೋ ಅಂತಹವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವರು ತಿಳಿಸಿದರು.
ಜನತಾ ದರ್ಶನ ಹೊಸ ವ್ಯವಸ್ಥೆ : ಜನತಾ ದರ್ಶನ ಕಾರ್ಯಕ್ರಮವಾಗುವುದಕ್ಕಿಂತ ಹತ್ತು ದಿನಗಳ ಮುಂಚೆಯೇ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಕುರಿತು ಜಿಲ್ಲಾಡಳಿತದಿಂದ ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ. ವಿವಿಧೆಡೆಯಿಂದ ಬಂದಿರುವ ಸಾರ್ವಜನಿಕರಿಗೆ ಮೂಲಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಸಾಧ್ಯವಾದರೆ ತಮ್ಮ ಸಮಸ್ಯೆಗಳಿಗೆ ಇವತ್ತಿನ ಸಂಜೆಯೊಳಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಎರಡು ದಿವಸಗಳ ಹಿಂದೆ ಬಂದಿರುವ ಅರ್ಜಿಗಳ ಪರಿಹಾರಕ್ಕೆ ಆದಷ್ಟು ಶೀಘ್ರ (ಇಂದು ಸಂಜೆ) ಘೋಷಣೆ ಮಾಡಲಾಗುವುದು. 300 ಅರ್ಜಿಗಳ ಸ್ವೀಕೃತಿ : ಜನತಾ ದರ್ಶನದಲ್ಲಿ ಈಗಾಗಲೇ 300 ಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕಂದಾಯ ಇಲಾಖೆಯ 135, ನಗರಾಬಿವೃದ್ಧಿ ಕೋಶದ 38, ಜಿಲ್ಲಾ ಪಂಚಾಯತ್‌ಗೆ ಸಂಬಂಧಿತ 4, ವಿವಿಧ ಇಲಾಖೆಗಳ ಹಿ 123 ಅರ್ಜಿಗಳಿವೆ. 188 ಅರ್ಜಿಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ.ಉಳಿದವುಗಳಿಗೆ ಸ್ಪಂದಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ವಿಶೇಷ ಆಡಳಿತಾತ್ಮಕ ಜಿಲ್ಲೆ ನಮ್ಮದು: ಗದಗ ಜಿಲ್ಲೆಯು ವಿಶೇಷ ಆಡಳಿತಾತ್ಮ ಜಿಲ್ಲೆಯಾಗಿದೆ. ಇ ಆಡಳಿತ ವ್ಯವಸ್ಥೆ ಪ್ರಾರಂಭಿಸಿದ ಮೊದಲ ಹಾಗೂ ಉತ್ತಮ ಜಿಲ್ಲೆ ನಮ್ಮದಾಗಿದೆ. ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಶೇಕಡ 99.02 ಅ ಪ್ರಗತಿ ಸಾಧಿಸಲಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಜಿಲ್ಲೆ ಅಗ್ರಣೀಯ ಸ್ಥಾನದಲ್ಲಿದ್ದು ಇದಕ್ಕೆ ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಗಳ ಕಾಳಜಿ, ಸ್ಪಂದನೆ ಹಾಗೂ ಜವಾಬ್ದಾರಿಯೂ ಕಾರಣವಾಗಿದೆ. ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಕಾಯ್ದುಕೊಂಡಿದ್ದು ಸಂತಸದ ವಿಷಯವಾಗಿದೆ. ಪಂಚ ಗ್ಯಾರಂಟಿಗಳ ಕುರಿತು ಕೆಲವರು ಅಸೂಯೆಯಿಂದ ಟೀಕೆ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿಲ್ಲ. ಗ್ಯಾರಂಟಿ ಯೋಜನೆಗಳು ಜನರ ಮುಖದಲ್ಲಿ ನಗು ಮೂಡಿಸುವ ಕಾರ್ಯಕ್ರಮಗಳಾಗಿವೆ. ಬಡತನ ನಿರ್ಮೂಲನೆ ಮಾಡುವುದು ಹಾಗೂ ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದೇ ರಾಜ್ಯ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಬೇಕು. ನಮ್ಮದು ಸತ್ವ, ತತ್ವ ಆಧಾರಿತ ಆಡಳಿತವಾಗಿದೆ ಎಂದರು.
ಪ್ರಭುವಿನೆಡೆಗೆ ಪ್ರಭುತ್ವ : ಹಿಂದಿನ ರಾಜರುಗಳ ಕಾಲದಲ್ಲಿ ನ್ಯಾಯದ ಗಂಟೆ ಇರುತ್ತಿತ್ತು. ಅದೇ ಕಲ್ಪನೆಯಲ್ಲಿಯೇ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಜಾರಿತರಲಾಗಿದೆ. ಸಾರ್ವಜನಿಕರ ತಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತ, ಪೊಲೀಸ ಇಲಾಖೆಯ ಗಮನಕ್ಕೆ ಬಂದು ತ್ವರಿತ ಪರಿಹಾರ ಕಂಡುಕೊಳ್ಳಲು ಅನುವು ಮಾಡಿಕೊಡಲಾಗಿದೆ. ಥರ್ಡ ಐ : ನಾಗರಿಕರಿಗೆ ರಕ್ಷಣೆ ಒದಗಿಸಲು ಪೊಲೀಸ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಥರ್ಡ್ ಐ ಮೂಲಕ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ನಾಗರೀಕರು ಭಯಮುಕ್ತ ವಾತಾವರಣದಲ್ಲಿ ಜೀವನ ನಿರ್ವಹಿಸಬಹುದಾಗಿದೆ. ಸಾರಿಗೆ ಸಂಚಾರದ ನಿಯಮಗಳ ಉಲ್ಲಂಘನೆಗಳು ಕಡಿಮೆಯಾಗಿವೆ.
ಈ ಜನತಾ ದರ್ಶನ ಕಾರ್ಯಕ್ರಮ ಇತರರಿಗೆ ಮಾದರಿಯಾಗಬೇಕು. ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವೇ ದಿನನಿತ್ಯದ ಕಚೇರಿ ಕೆಲಸದಲ್ಲಿ ಆಗಬೇಕೆಂದು ರಾಜ್ಯದ ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಿರ್ದೇಶನ ನೀಡಿದರು. ಗದಗ ತಹಶೀಲ್ದಾರರ ಕಚೇರಿ ಕಡತಗಳ ನಿರ್ವಹಣೆ ಬಗ್ಗೆ ವಿಚಾರಿಸಿದಾಗ 440 ಅರ್ಜಿಗಳು ಬಾಕಿ ಉಳಿದಿದ್ದು ಅದರಲ್ಲಿ 280 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ. 156 ಆದೇಶದ ಪ್ರತಿಯನ್ನು ಈ ಕಾರ್ಯಕ್ರಮದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಯೋಜನೆಗಳ ಬಗ್ಗೆ ಮಾಹಿತಿ ಕೊರತೆ ಇದ್ದಲ್ಲಿ ಅಥವಾ ಯೋಜನೆ ಸೌಲಭ್ಯ ಪಡೆಯಲು ವಿಳಂಬವಾಗಿರುವವರು ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸುತ್ತಾರೆ. ಫೆಬ್ರುವರಿ 16 ರಿಂದಲೇ ಸಾರ್ವಜನಿಕರಿಂದ ಅರ್ಜಿ ಸ್ವೀಕೃತಿ ಕಾರ್ಯ ಪ್ರಾರಂಭಗೊಂಡಿರುತ್ತದೆ. ಕೆಲವು ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗಿದೆ. ಉಳಿದವುಗಳನ್ನು ನಿಗದಿತ ಕಾಲಾವಧಿಯಲ್ಲೇ ಇತ್ಯರ್ಥಗೊಳಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಗಣ್ಯರಾದ ಸಿದ್ದು ಪಾಟೀಲ, ಶ್ರೀಮತಿ ಸುಜಾತಾ ದೊಡಮನಿ, ತಾಲೂಕು ಮಟ್ಟದ ತಹಶೀಲ್ದಾರರು, ತಾ.ಪಂ. ಕಾರ್ಯ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು. ವೆಂಕಟೇಶ ಅಲ್ಕೋಡ್ ತಂಡದಿಂದ ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 