ಪಿ.ಸಿ. ಮತ್ತು ಪಿ.ಎನ್.ಡಿ.ಟಿ, ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ
PC and PNDT, District Advisory Committee and District Inspection and Monitoring Committee Meeting
ಗದಗ ಡಿಸೆಂಬರ್ 06: ಪಿ.ಸಿ. ಮತ್ತು ಪಿ.ಎನ್.ಡಿ.ಟಿ, ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಎಸ್.ಎಸ್.ನೀಲಗುಂದ ಮಾತನಾಡಿ ಜಿಲ್ಲೆ0ುಲ್ಲಿ ಕಾ0ುರ್ನಿರ್ವಹಿಸುತ್ತಿರುವ ಸ್ಕಾ-್ಯನಿಂಗ್ ಸೆಂಟರ್‌ಗಳು ಕಡ್ಡಾ0ುವಾಗಿ ನಿಗದಿತ ಅವಧಿ0ುಲ್ಲಿ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ಸೇರಿದಂತೆ ಒಟ್ಟಾರೆ 72 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಸ್ಕಾ-್ಯನಿಂಗ್ ಸೆಂಟರ್‌ಗಳು ಪಿ.ಸಿ ್ಘಪಿ.ಎನ್.ಡಿ.ಟಿ ಕಾ0ೆ್ದು0ುಡಿ ನಿ0ುಮಾನುಸಾರ ನೋಂದಣಿ ಮಾಡಿಕೊಳ್ಳಬೇಕು. ಸ್ಕಾ-್ಯನಿಂಗ್ ಕುರಿತಾದ ಮಾರ್ಗಸೂಚಿಗಳನ್ನು ಪಾಲಿಸಿ ನಿಗದಿತ ನಮೂನೆಗಳನ್ನು ನಿರ್ವಹಿಸಬೇಕು. ನಿಗದಿತ ನಿ0ುಮ ಪಾಲನೆ ಹಾಗೂ ದಾಖಲಾತಿಗಳನ್ನು ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವೈ.ಕೆ.ಭಜಂತ್ರಿ ಅವರು ಮಾತನಾಡಿ, ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾ0ೆ್ದು ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಚಿಕ್ಕವಯಸ್ಸಿನಲ್ಲೇ ಗರ್ಭಧಾರಣೆ (ಖಿಜಜಟಿಚಿರಜ ಕಡಿಜರಟಿಚಿಟಿಛಿಥಿ)ಗೆ ಬಾಲ್ಯ ವಿವಾಹ ಪ್ರಮುಖ ಕಾರಣವಾಗಿದ್ದು ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ವೈದ್ಯರುಗಳು ಸೂಕ್ತ ತನಿಖೆಗೆ ಮುಂದಾಗಬೇಕು. ಚಿಕ್ಕ ವಯಸ್ಸಿನಲ್ಲಿ ಗರ್ಭಧಾರಣೆಯು ಇದು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.ಬಾಲ್ಯ ವಿವಾಹ ಮತ್ತು ಲೈಂಗಿಕ ಆರೋಗ್ಯದ ಬಗ್ಗೆ ಜಾಗೃತಿ ಇಲ್ಲದಿರುವುದರಿಂದ ಚಿಕ್ಕವಯಸ್ಸಿನಲ್ಲೇ ಗರ್ಭಧಾರಣೆ ಆಗುತ್ತಿವೆ. ಗರ್ಭಪಾತ ಮಾಡಲು ಆಸ್ಪತ್ರೆಗಳು ಸಮಗ್ರ ಗರ್ಭಪಾತ ಸೇವೆಗಳ ಕಾ0ುರ್ಕ್ರಮದಡಿ (ಎಂಟಿಪಿ) ಕಡ್ಡಾ0ುವಾಗಿ ನೋಂದಾಯಿಸಬೇಕು ಎಂದು ತಿಳಿಸಿದರು.
ಜಿಲ್ಲೆ0ು ವಿವಿಧ ಆರೋಗ್ಯ ಸಂಸ್ಥೆಗಳ ನೋಂದಣಿ, ನವೀಕರಣ ಹಾಗೂ ಸ್ಕ್ಯಾನಿಂಗ್ ಸೆಂಟರ್ ಪ್ರಾರಂಭಿಸಲು ಹೊಸ ಮಶಿನ್ ಖರೀದಿ, ಸ್ಕ್ಯಾನ್ ಸೆಂಟರ್ ಗೆ ಹೆಚ್ಚುವರಿಯಾಗಿ ಸ್ಕ್ಯಾನ್ ಮಶಿನ್ ಖರೀದಿಸಲು ಬಂದ ಅರ್ಜಿಗಳಿಗೆ ಅನುಮತಿ ಕುರಿತಂತೆ ಚರ್ಚಿಸಲಾಯಿತು.
ಸಭೆ0ುಲ್ಲಿ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ .ಎಸ್.ಜಿ.ಪಲ್ಲೇದ, ಡಾ.ಸಂತೋಷ ಹುಯಿಲಗೋಳ, ಡಾ. ವಿಶ್ವನಾಥ ಕುಲಕರ್ಣಿ, ಡಾ.ರಾಜಶೇಖರ ಪಾಟೀಲ, ಡಾ.ಶೃತಿ ಪಾಟೀಲ, ಶ್ರೀಮತಿ ಫಕೀರಮ್ಮ ಲಕ್ಕುಂಡಿ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 