ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಂಜೀವಿನಿ ಒಕ್ಕೂಟದ ಪಾತ್ರ ಮಹತ್ವ ಪಿಡಿಒ ಅಪರಂಜಿ
PDO Aparanji stresses importance of Sanjeevini Coalition's role in empowering women economically
ಕಂಪ್ಲಿ 31: ಸರ್ಕಾರದ ರಚಿಸಿರುವ ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿವೆ’ ಎಂದು ಪಿಡಿಒ ಕೆ.ಅಪರಂಜಿ ಹೇಳಿದರು. ತಾಲ್ಲೂಕಿನ ನೆಲ್ಲುಡಿ ಗ್ರಾಪಂ ಅಟವರಣದಲ್ಲಿ ಹೊಸ ನೆಲ್ಲುಡಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಗ್ರಾಪಂ ಸಹಯೋಗದಲ್ಲಿ ಬುಧವಾರ ಏರಿ್ಡಸಿದ್ದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿ, ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ ಅವರನ್ನು ಆರ್ಥಿಕವಾಗಿ ಪ್ರಗತೀಶೀಲರನ್ನಾಗಿಸುವ ಸಲುವಾಗಿ ಸಂಜೀವಿನಿ ಒಕ್ಕೂಟಗಳನ್ನು ರಚಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳಿದ್ದು, ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಹಾಗೂ ಆರ್ಥಿಕವಾಗಿ ಸಬಲರಾಗಲು ಸಂಜೀವಿನಿ ಒಕ್ಕೂಟದ ಪಾತ್ರ ಮಹತ್ವದ್ದಾಗಿದೆ.
ಈ ಒಕ್ಕೂಟದಿಂದ ಸಾಕಷ್ಟು ಮಹಿಳೆಯರು ತಮ್ಮ ಭವಿಷ್ಯವನ್ನು ಆರ್ಥಿಕವಾಗಿ ವೃದ್ಧಿಸಿಕೊಂಡಿದ್ದಾರೆ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಮ್ಮಿಗನೂರು ವಲಯ ಮೇಲ್ವಿಚಾರಕಿ ಎರೆ್ರಮ್ಮ ಮಾತನಾಡಿ, ‘ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಇಡೀ ಕುಟುಂಬವೇ ಪ್ರಗತಿ ಸಾಧಿಸುತ್ತದೆ. ಮಹಿಳೆಯರು ಸಂಘಗಳ ಮೂಲಕ ಬಿಡುವಿನ ಸಮಯವನ್ನು ಆರ್ಥಿಕತೆಗೆ ಬಳಸಿಕೊಳ್ಳಿ ಎಂದರು.ತಾಲೂಕು ಮಹಿಳಾ ಒಕ್ಕೂಟದ ಸಂಯೋಜಕಿ ಪಾರ್ವತಿ ಮಾತನಾಡಿ, ಸ್ತ್ರೀಶಕ್ತಿ ಯೋಜನೆ 2000-01ರ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಾರಿಗೊಂಡಿದ್ದು, ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಇದರ ಮುಖ್ಯ ಉದ್ದೇಶವಾಗಿದೆ, ಬ್ಯಾಂಕ್‌ನಿಂದ ಸಾಲ ತೆಗೆದು ಕೊಂಡು ಆರ್ಥಿಕವಾಗಿ ಸಬಲರಾಗಲು ಈ ಯೋಜನೆ ಅನುಕೂಲವಾಗಿದೆ.
ಗ್ರಾಪಂ ಮಟ್ಟದಲ್ಲಿ ವಾರ್ಷಿಕ ಸಾಮಾನ್ಯ ಸಭೆ ಮಾಡಿ, ಮಹಿಳೆಯರ ಸ್ವಾವಲಂಬನೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜಯಮ್ಮ, ಸದಸ್ಯೆ ಶಾಂತಿ, ಕಾರ್ಯದರ್ಶಿ ಕೆ.ಮನೋಜ್, ಬಿಲ್ ಕಲೆಕ್ಟರ್ ಡಿ.ರಾಜಾಸಾಬ್, ಡಾಟಾ ಆಪರೇಟರ್ ಪೀರಾಸಾಬ್, ಹೊಸ ನೆಲ್ಲುಡಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷ ಸರೋಜಮ್ಮ, ಕಾರ್ಯದರ್ಶಿ ಗಂಗಮ್ಮ, ಖಜಾಂಚಿ ಲಕ್ಷ್ಮೀ, ಮಹತ್ವಕಾಂಕ್ಷಿ ಯೋಜನೆಯ ತಾಲೂಕು ಸಂಯೋಜಕ ಬಸವನಗೌಡ, ಸಂಪನ್ಮೂಲ ವ್ಯಕ್ತಿ ಶ್ರೀಗೌರಿ, ಎಲ್‌ಸಿಆರ್‌ಪಿ ಮಾಲಾ, ಎನ್‌ಬಿಕೆ ತ್ರಿವೇಣಿ, ಪಶುಸಕಿ ಬಿ.ಮಾನಸ, ಕೃಷಿಸಕಿ ಚಂದ್ರಕಲಾ ಸೇರಿದಂತೆ ಮಹಿಳೆಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 